ಮದ್ದೂರು: ನಗರದ ಪೂರ್ಣಪ್ರಜ್ಞಾ ಶಾಲೆಗೆ ಪ್ರಸಕ್ತ ಸಾಲಿನಲ್ಲಿ ತಾಲ್ಲೂಕು, ಜಿಲ್ಲೆ, ವಿಭಾಗೀಯ ಸೇರಿದಂತೆ ರಾಜ್ಯಮಟ್ಟದಲ್ಲಿ ನಡೆದ ಅನೇಕ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿಗಳು ಲಭಿಸಿವೆ.

ಅ.30ರಂದು ಮಂಡ್ಯದಲ್ಲಿ ರಾಜ್ಯ ಮಾಹಿತಿ ತಂತ್ರಜ್ಞಾನ, ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮಂಡ್ಯದ ಸಹಯೋಗದೊಂದಿಗೆ ನಡೆದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಪ್ರೀತಮ್ ವಿ. ಮತ್ತು ಎಸ್. ಆರ್. ಭುವನಗೌಡವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಂಡ್ಯದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿ ಎಸ್. ಹರ್ಷ ಪ್ರಥಮ, ಗುಂಡು ಎಸೆತ ಸ್ಪರ್ಧೆಯಲ್ಲಿ ವಿ. ಪ್ರೀತಮ್ ದ್ವೀತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಮಂಡ್ಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಏರ್ಪಡಿಸಿದ್ದ ‘ಇಂದಿರಾ ಪ್ರಿಯದರ್ಶಿನಿ’ ಪ್ರಬಂಧ ಸ್ಪರ್ಧೆಯಲ್ಲಿ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಎಸ್. ಸಿಂಚನಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಮದ್ದೂರಿನ ನಗರಸಭೆಯ ವತಿಯಿಂದ ಸುವರ್ಣ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ‘ಪರಿಸರ ಮಾಲಿನ್ಯ’ ಕುರಿತ ಪ್ರಬಂಧ ಸ್ಪರ್ಧೆಯಲ್ಲಿಯೂ ಮೊದಲಿಗಳಾಗಿದ್ದಾಳೆ. ಇದೇ ಸ್ಪರ್ಧೆಯಲ್ಲಿ 10ನೇ ತರಗತಿಯ ಚಂದನಾ ಎಸ್.ಪಿ. ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಯುವ ಸಂಸತ್ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯರಾದ ನೂತನಾ. ಟಿ ಹಾಗೂ ಚಂದನಾ ಎಸ್.ಪಿ. ಅವರು ಸ್ಪರ್ಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಶಾಲೆಯ ಅಧ್ಯಕ್ಷೆ ಕಸ್ತೂರಿ ಹಾಗೂ ಕಾರ್ಯದರ್ಶಿ ಅನಂತೇಗೌಡ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.