ಮಂಡ್ಯ: ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 107 ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಶಾಸಕರಾದ ಸಿ.ಎಸ್.ಪುಟ್ಟರಾಜು, ಎಂ.ಶ್ರೀನಿವಾಸ್, ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ ಸೇರಿ 24 ಆರೋಪಿಗಳಿಗೆ ಗುರುವಾರ ಸಮನ್ಸ್ ಜಾರಿಗೊಳಿಸಿದೆ.
ಜುಲೈ 20ರಂದು 11 ಗಂಟೆಗೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. 2009ರಲ್ಲಿ ಅಭಿವೃದ್ಧಿಗೊಳಿಸಲಾದ ವಿವೇಕಾನಂದ ಬಡಾವಣೆಯ ಲೇಔಟ್‌ನಲ್ಲಿ 107ನಿವೇಶನಗಳ ಅಕ್ರಮ ಹಂಚಿಕೆ ಕುರಿತು 2010ರಲ್ಲಿ ಆರ್‌ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ನಿವೇಶನಕ್ಕಾಗಿ ಸಾರ್ವಜನಿಕ ಪ್ರಕರಣೆ ಹೊರಡಿಸುವ ಮುನ್ನವೇ ಆರೋಪಿಗಳು ತಮಗೆ, ತಮ್ಮ ಕುಟುಂಬ ಸದಸ್ಯರಿಗೆ ನಿವೇಶನ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ನಂತರ ಸಿಐಡಿ ತನಿಖೆಯೂ ನಡೆದಿತ್ತು. 2015ರಲ್ಲಿ ರಾಜ್ಯ ಸರ್ಕಾರ ಸಿಬಿಐಗೆ ವಹಿಸಿತ್ತು. 2016ರಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.