ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಶಿಕ್ಷಣವೇ ಶ್ರೇಷ್ಠ ಸೇವೆ- ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ

Last Updated 21 ಫೆಬ್ರುವರಿ 2022, 3:00 IST
ಅಕ್ಷರ ಗಾತ್ರ

ನಾಗಮಂಗಲ: ಗುಣಮಟ್ಟದ ಶಿಕ್ಷ ಣಕ್ಕಿಂತ ಮಿಗಿಲಾದ ಸೇವೆ ಮ ತ್ತೊಂದಿಲ್ಲ. ಅಂಥ ಶ್ರೇಷ್ಠ ಶಿಕ್ಷಣವನ್ನು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನೀಡು ತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ತಾಲ್ಲೂಕಿನ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರ 9ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರ ಮದಲ್ಲಿ ಭಾನುವಾರ ಮಾತನಾಡಿದರು.

ಉತ್ತಮ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಒಂದು ಸಮಾಜದ ಏಳಿಗೆ ಸಾಧ್ಯ. ಇಂದು ನಮ್ಮಲ್ಲಿರುವ ಹಣ, ಸಂಪತ್ತಿಗಿಂತ ಜ್ಞಾನವೇ ಶ್ರೇಷ್ಠ. ನಮ್ಮಲ್ಲಿರುವ ಜ್ಞಾನ, ಕೌಶಲ, ತಿಳಿವಳಿಕೆ, ವ್ಯಕ್ತಿತ್ವಗಳೇ ನಮ್ಮನ್ನು ಸರ್ವಕಾಲಕ್ಕೂ ಕಾಯುವ ಅಂಶಗಳಾಗಿವೆ ಎಂದರು.

ಆದಿಚುಂಚನಗಿರಿಯಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಚಾಲನೆ ನೀಡಲಾಗಿದೆ. ಇಲ್ಲಿಗೆ ಬರುವ ಭಕ್ತರಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಉದ್ದೇಶದಿಂದ ಪ್ಲಾನೆಟೋರಿಯಂ ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಶೋಷಿತರನ್ನು ಮೇಲೆತ್ತು ವಲ್ಲಿ ಆದಿಚುಂಚನಗಿರಿ ಮಠ ಮುಂಚೂಣಿಯಲ್ಲಿದೆ ಎಂದರು.

ಅಬಕಾರಿ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ನಿರ್ಮಲಾನಂದನಾಥ ಸ್ವಾಮೀಜಿ, ಹಬ್ಬ, ಸಾಂಪ್ರದಾಯಿಕ ಆಚರಣೆಗಳು ಮತ್ತು ಪರಂಪರೆಗಳು ನಿಲ್ಲಬಾರದು. ಅವುಗಳನ್ನು ಚಿಕ್ಕದಾಗಿಯಾದರೂ ಆಚರಿಸುವುದು ಮುಖ್ಯ ಎಂದರು.

ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ, ಪುರುಷೋತ್ತಮಾ ನಂದನಾಥ ಸ್ವಾಮೀಜಿ, ಬೆಂಗಳೂರು ಶಾಖಾ ಮಠದ ಆಕಾಶನಾಥ ಸ್ವಾಮೀಜಿ, ಶಿವಲಿಂಗನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ, ಪ್ರಕಾಶನಾಥ ಸ್ವಾಮೀಜಿ, ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಪಾಂಡವಪುರ ಶಾಸಕ ಸಿ.ಎಸ್.ಪುಟ್ಟ ರಾಜು, ಡಾ.ರಾಮೇಗೌಡ, ತುಮಕೂರು ವಿವಿ ಕುಲಪತಿ ಡಾ.ಸಿದ್ದೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT