ಮಂಡ್ಯ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾಗಲು ಶಿಕ್ಷಕರಿಗೆ ಕಾಲಕಾಲಕ್ಕೆ ತರಬೇತಿ ಅವಶ್ಯ’ ಎಂದು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಹೇಳಿದರು.

ನಗರದ ಕೃಷಿಕ್ ಸರ್ವೋದಯ ಫೌಂಡೇಷನ್ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ವಲಯ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಮಂಗಲ ಟಿ.ತಿಮ್ಮೇಗೌಡ ಐಎಎಸ್ ಪ್ರತಿಷ್ಠಾನ, ಕೃಷಿಕ್ ಸರ್ವೋದಯ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಗುಣಮಟ್ಟ ಶಿಕ್ಷಣದ ಪ್ರಾಮುಖ್ಯತೆ-ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಅಭಿವೃದ್ಧಿಗೆ ಶಿಕ್ಷಣ ಮತ್ತು ಆರೋಗ್ಯ ಎರಡು ಕಣ್ಣುಗಳಿದ್ದಂತೆ. ಕೃಷಿಕ್ ಫೌಂಡೇಷನ್ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಎಸ್. ಮಧುಸೂದನ್ ಮಾತನಾಡಿ, ‘ದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ಸಿಗಬೇಕು. ಇಂದಿನ ವಿದ್ಯಾರ್ಥಿಗಳಿಗೆ ಗುಣಾತ್ಮಕ ಮತ್ತು ಸಮಾನ ಶಿಕ್ಷಣ ಲಭ್ಯವಾಗಬೇಕಿದೆ ಎಂದರು.

ಕೃಷಿಕ್ ಸರ್ವೋದಯ ಫೌಂಡೇಷನ್ ಕಾರ್ಯದರ್ಶಿ ಡಾ.ಬೋರಯ್ಯ, ನಿವೃತ್ತ ಪ್ರಾಧ್ಯಾಪಕ ಪ್ರೊ. ಪ್ರಕಾಶ್, ಮಂಗಲ ಟಿ.ತಿಮ್ಮೇಗೌಡ ಐಎಎಸ್(ನಿ) ಪ್ರತಿಷ್ಠಾನ ಅಧ್ಯಕ್ಷ ಎ.ಸಿ. ರಮೇಶ್, ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಚ್.ಆರ್. ಕನ್ನಿಕಾ, ಕಾರ್ಯಾಗಾರರ ಸಂಚಾಲಕ ಕೆ.ಎಂ. ಕೃಷ್ಣೇಗೌಡ ಕೀಲಾರ, ಶಿಕ್ಷಕ ಮಂಗಲ ಶಿವಣ್ಣ ಇದ್ದರು.