ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ ತಾಲ್ಲೂಕಿನಲ್ಲಿ ಉತ್ತಮ ಮಳೆ

Published 19 ಮೇ 2024, 13:56 IST
Last Updated 19 ಮೇ 2024, 13:56 IST
ಅಕ್ಷರ ಗಾತ್ರ

ಮಳವಳ್ಳಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಹಲವೆಡೆ ಭಾನುವಾರ ಉತ್ತಮ ಮಳೆ ಸುರಿಯಿತು.

ಕಳೆದೊಂದು ವಾರದಿಂದ ಮಳೆ ವಾತಾವರಣ ಇತ್ತು, ಭಾನುವಾರ ಸಂಜೆ 4 ಗಂಟೆಗೆ ಶುರುವಾದ ವರ್ಷಧಾರೆ ನಿರಂತರವಾಗಿ ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರು ಮಳೆಯ ಆಗಮನದಿಂದ ಖುಷಿಪಟ್ಟರು.

ತಾಲ್ಲೂಕಿನ ಕಿರುಗಾವಲು, ತಳಗವಾದಿ, ನೆಲಮಾಕನಹಳ್ಳಿ, ಮಾದಹಳ್ಳಿ, ಟಿ.ಕಾಗೇಪುರ, ದೇವಿಪುರ, ಅಂಚೆದೊಡ್ಡಿ, ನೆಲ್ಲೂರು, ಕ್ಯಾತೇಗೌಡನದೊಡ್ಡಿ, ಮಾರೇಹಳ್ಳಿ, ರಾವಣಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಇದರಿಂದಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT