ಶುಕ್ರವಾರ, ಅಕ್ಟೋಬರ್ 30, 2020
28 °C

ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು, ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಜಿಲ್ಲೆಯ ವಿವಿಧೆಡೆ ಮಂಗಳವಾರ ಭಾರಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಬೀಡಿ ಕಾರ್ಮಿಕರ ಕಾಲೊನಿಯ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡಿದರು.

ಬೆಳಿಗ್ಗೆಯಿಂದಲೂ ಬಿಸಿಲಿನ ವಾತಾವರಣವಿದ್ದು ಮಧ್ಯಾಹ್ನವೇ ಕೆಲಕಾಲ ಮಳೆ ಸುರಿಯಿತು. ಸಂಜೆ 6 ಗಂಟೆಗೆ ಆರಂಭಗೊಂಡ ಮಳೆ 7.30ರವರೆಗೂ ಧಾರಾಕಾರವಾಗಿ ಸುರಿಯುತ್ತಿತ್ತು. ಇಳಿಜಾರಿನ ಪ್ರದೇಶದಲ್ಲಿರುವ ಬೀಡಿಕಾರ್ಮಿಕರ ಕಾಲೊನಿಯ ಜನರು ಮಳೆಯಿಂದ ಸಂಕಷ್ಟಕ್ಕೀಡಾಗಿದ್ದರು.

ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಮನೆಗಳಿಗೆ ನುಗ್ಗಿತು.  ಅಪಾರ ಪ್ರಮಾಣದ ನೀರು ಹರಿದು ಬಂದ ಕಾರಣ ಮನೆಯಗಳ ಒಳಗೆ ಮಂಡಿಯುದ್ದ ನೀರು ನಿಂತಿತ್ತು. ನಿವಾಸಿಗಳು ನೀರು ಹೊರಹಾಕಲು ಹರಸಾಹಸಪಟ್ಟರು. ಹಲವು ಮನೆಗಳಲ್ಲಿ ಬಟ್ಟೆ, ಧಾನ್ಯಗಳು ಜಲಾವೃತಗೊಂಡಿದ್ದರು.

ನಿರಂತರ  ಮಳೆಯಿಂದಾಗಿ ರಸ್ತೆಗಳ ತುಂಬೆಲ್ಲಾ ನೀರು ಹರಿಯಿತು. ನಗರದ ಅಂಚೆ ಕಚೇರಿ, ನಗರಸಭೆ ಕಚೇರಿ ಬಳಿ ಅಪಾರ ಪ್ರಮಾಣದ ನೀರು ನಿಂತಿತ್ತು. ವಿವಿಧೆಡೆ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿತ್ತು. ವಾಹನಗಳಲ್ಲಿ ಓಡಾಡುವ ಜನರು ಹರಸಾಹಸಪಟ್ಟರು. ಕಾರ್ಖಾನೆ ವೃತ್ತ, ನಂದಾ ವೃತ್ತ, ಮಹಾವೀರ ವೃತ್ತ, ಜಯಚಾಮರಾಜ ವೃತ್ತಗಳು ಕೆರೆಯಂತಾಗಿದ್ದವು. ಮದ್ದೂರು, ನಾಗಮಂಗಲ, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲೂ ಧಾರಾಕಾರ ಮಳೆ ಸುರಿದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು