ಶ್ರೀರಂಗಪಟ್ಟಣ: ತುಮಕೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದಿಂದ ನವಿಲುಗಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದಲ್ಲಿ ಹಕ್ಕಿಗಳ ಬಗ್ಗೆ ನಿಗಾ ವಹಿಸಲಾಗಿದೆ.

ಪಕ್ಷಿಧಾಮಕ್ಕೆ ವಂಶಾಭಿವೃದ್ಧಿಗಾಗಿ ಬಂದಿರುವ ವಲಸೆ ಪಕ್ಷಿಗಳಾದ ಪೆಲಿಕಾನ್, ಪೇಂಟೆಡ್ ಸ್ಟಾರ್ಕ್, ಓಪನ್ಬಿಲ್; ಸ್ಥಳೀಯ ಪಕ್ಷಿಗಳಾದ ಐಬಿಸ್, ಹೆರಾನ್, ಕಾರ್ಮೊರೆಂಟ್ ಜಾತಿಯ ಪಕ್ಷಿಗಳ ಚಲನ ವಲನವನ್ನು ಅರಣ್ಯ ಇಲಾಖೆ ಸಿಬ್ಬಂದಿ ಗಮನಿಸುತ್ತಿದ್ದಾರೆ.

‘ಪಕ್ಷಿಧಾಮ ಮತ್ತು ಆಸುಪಾಸಿನಲ್ಲಿ ಯಾವುದೇ ಪಕ್ಷಿ ಮೃತಪಟ್ಟಿಲ್ಲ. ಇಲ್ಲಿರುವ ಎಲ್ಲ ಪಕ್ಷಿಗಳು ಆರೋಗ್ಯವಾಗಿವೆ. ವಲಸೆ ಪಕ್ಷಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಇರುತ್ತದೆ. ಹಾಗಾಗಿ ಸೋಂಕು ಹರಡುವ ಸಾಧ್ಯತೆ ಇಲ್ಲ. ಆದರೂ ನಿಗಾ ವಹಿಸಿದ್ದೇವೆ. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಸಿಎಫ್ ಜತೆ ಚರ್ಚೆ ನಡೆಸಲಾಗುವುದು’ ಎಂದು ಪಕ್ಷಿಧಾಮದ ಉಪ ವಲಯ ಅರಣ್ಯಾಧಿಕಾರಿ ರವಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-40-1959622295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.