ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿಗರ ದಟ್ಟಣೆ: ರಂಗನತಿಟ್ಟು ಪ್ರವೇಶ ಸಮಯ ಬದಲು

Published 24 ಡಿಸೆಂಬರ್ 2023, 16:16 IST
Last Updated 24 ಡಿಸೆಂಬರ್ 2023, 16:16 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ಕ್ರಿಸ್‌ಮಸ್‌ ಮತ್ತು ವರ್ಷಾಂತ್ಯದಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದ ಪ್ರವೇಶ ಸಮಯದಲ್ಲಿ ಮಾರ್ಪಟು ಮಾಡಲಾಗಿದೆ.

ಜ.2ರವರೆಗೆ ಬೆಳಿಗ್ಗೆ 6ರಿಂದ ಸಂಜೆ 5.30ರವರೆಗೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು. ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 8.30ರಿಂದ 5.45ವರೆಗೆ ಅವಕಾಶವಿತ್ತು ಎಂದು ಅರಣ್ಯ ಇಲಾಖೆ ತಿಳಿಸಿದೆ.

ದಾಖಲೆ ಆದಾಯ

ಪಕ್ಷಿಧಾಮಕ್ಕೆ ಭಾನುವಾರ ವಿದೇಶಿ ಪ್ರವಾಸಿಗರು ಸೇರಿ 4,885 ಮಂದಿ ಭೇಟಿ ನೀಡಿದ್ದು, ಒಂದೇ ದಿನ ₹5.99ಲಕ್ಷ ಆದಾಯ ಬಂದಿದೆ. ಇದು ಇದುವರೆಗಿನ ದಾಖಲೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT