ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡವನ್ನು ನಗರದ ಎಫ್.ಟಿ.ಎಸ್.ಸಿ–1 (ಪೋಕ್ಸೊ ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ವಿಧಿಸಿದ್ದಾರೆ.
ಮದ್ದೂರು ಪಟ್ಟಣದ ಸೋಮೇಗೌಡರ ಬೀದಿಯ ನಿವಾಸಿ ಸುನಿಲ್‌ಕುಮಾರ್ (28) ಬಿನ್ ಬಸಪ್ಪ ಎಂಬಾತ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.
ಆರೋಪಿ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಸಂತೋಷ್ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪತ್ರ ಸಲ್ಲಿಸಿದ್ದರು.
ನೊಂದ ಬಾಲಕಿಗೆ ₹10.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.