ಶನಿವಾರ, ಜುಲೈ 24, 2021
23 °C

ನಾಗಮಂಗಲ: ಬಾಲಕಿ ಮೇಲೆ ಅತ್ಯಾಚಾರ; ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ: ರಾತ್ರಿ ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಅಪಹರಿಸಿ, ಗ್ರಾಮದ ಹೊರವಲಯಕ್ಕೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಅಲ್ಲದೇ ಬೆಳಿಗ್ಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿ, ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿ, ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂತರ ಪೋಷಕರು ಬೆಳ್ಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಿವೈಎಸ್‌ಪಿ ವಿಶ್ವನಾಥ್, ಪಿಎಸ್‌ಐ ದಯಾನಂದ್ ಮತ್ತು ಸಿಪಿಐ ರಾಜೇಂದ್ರ ಅವರ ತಂಡ ಕಾರ್ಯಾಚರಣೆ ನಡೆಸಿ‌ ಬೇರೆ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ನಂತರ ವಿಚಾರಣೆ ನಡೆಸಿದ‌ ಪೋಲಿಸರು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯ ಅನ್ವಯ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು