ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪ (ಮಂಡ್ಯ ಜಿಲ್ಲೆ): ಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳವಾರ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

4 ತಿಂಗಳ ಹಿಂದೆ ಆರೋಪಿಯು ಬಾಲಕಿಗೆ ತಿಂಡಿ, ಚಾಕೊಲೆಟ್‌, ಮೊಬೈಲ್ ಫೋನ್ ಕೊಡಿಸುವ ಆಸೆ ತೋರಿಸಿ ನಿಗೂಢ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಆರೋಪಿ ಬೆದರಿಸಿದ್ದರಿಂದ ಬಾಲಕಿ ಮನೆಯವರಿಗೆ ವಿಷಯ ತಿಳಿಸಿರಲಿಲ್ಲ.

‘ಈಚೆಗೆ ಗಣೇಶ ಮೂರ್ತಿಯನ್ನು ವಿಸರ್ಜಿಸುವ ಸಂದರ್ಭದಲ್ಲಿ ಆರೋಪಿ ಮತ್ತೆ ಬಾಲಕಿಗೆ ತೊಂದರೆ ನೀಡಿದ್ದ. ಆಕೆ ಮನೆಗೆ ಬಂದು ಅಳುತ್ತಿದ್ದಾಗ ವಿಷಯ ಗೊತ್ತಾಗಿ ಪೋಷಕರು ಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದರು. ಬಾಲಕಿ ಪೊಲೀಸ್ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾಳೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು