ಸಾಧನೆಗೆ ಶಿಕ್ಷಣವೇ ಅಸ್ತ್ರ: ರವೀಂದ್ರ ಶ್ರೀಕಂಠಯ್ಯ

ಮಂಡ್ಯ: ‘ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಶಿಕ್ಷಣವೇ ಅಸ್ತ್ರವಾಗಬೇಕು. ಶಿಕ್ಷಣದಿಂದ ಮಾತ್ರ ದೇಶ ಪ್ರಗತಿಯತ್ತ ಸಾಗುತ್ತದೆ’ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.
ತಾಲ್ಲೂಕಿನ ಯಲಿಯೂರು ಬಳಿಯ ಅನಿಕೇತನ ಶಿಕ್ಷಣ ಮಹಾವಿದ್ಯಾಲಯ, ಪಿಯು ಕಾಲೇಜು ವತಿಯಿಂದ ನಡೆದ ದಶಮಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ಯಾವುದೇ ಸರ್ಕಾರ ಬಂದರೂ ವಿದ್ಯಾರ್ಥಿಗಳ ಕಲಿಕೆಗೆ ಸೂಕ್ತ ವಾತಾವರಣ ಕಲ್ಪಿಸಿಕೊಡಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಕಟ್ಟಿಕೊಡುವುದು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಬೇಕು’ ಎಂದರು.
ಇದೇ ಸಂದರ್ಭದಲ್ಲಿ ಐದು ರೂಪಾಯಿ ವೈದ್ಯ ಡಾ.ಎಸ್.ಸಿ.ಶಂಕರೇಗೌಡ, ಮಮತೆಯ ಮಡಿಲು ಅನ್ನ ದಾಸೋಹ ಸಂಸ್ಥೆಯ ಮುಖ್ಯಸ್ಥ ಮಂಗಲ ಯೋಗೀಶ್, ಕನ್ನಿಕಾ ಶಿಲ್ಪಾ ತರಬೇತಿ ಸಂಸ್ಥೆಯ ಮುಖ್ಯಸ್ಥೆ ಎಚ್.ಆರ್.ಕನ್ನಿಕಾ ಅವರನ್ನು ಅಭಿನಂದಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿಡಿಪಿಯು ಉಮೇಶ್, ಚೇತನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ಸಿ.ಜಯರಾಮು, ಚುಂಚೇಗೌಡ, ಕೆ.ಎಂ.ಜಗದೀಶ್, ಎಚ್.ಎಸ್.ವಿಜಯಗೌಡ, ಡಾ. ರಾಮಲಿಂಗಯ್ಯ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.