ಸೋಮವಾರ, ಮೇ 23, 2022
26 °C

ನಾಲೆಗೆ ಬಿದ್ದು ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಂಡವಪುರ: ತಾಲ್ಲೂಕಿನ ಬನಘಟ್ಟ ಬಳಿಯ ವಿಶ್ವೇಶ್ವರಯ್ಯ ನಾಲೆಗೆ ಸೋಮವಾರ ರಾತ್ರಿ ಬೈಕ್ ಸವಾರ ಬಿದ್ದು ಮೃತಪಟ್ಟಿದ್ದಾರೆ.

ಮೈಸೂರಿನ ರಮಾಭಾಯಿ ನಗರದ ನಿವಾಸಿ ಕೃಷ್ಣಶೆಟ್ಟಿ ಅವರ ಪುತ್ರ ಯತೀಶ್ (34) ಮೃತ ಯುವಕ.

ಯುವಕ ಯತೀಶ್ ಸೋಮವಾರ ರಾತ್ರಿ ಮೈಸೂರಿನಿಂದ ಮೇಲುಕೋಟೆಯಲ್ಲಿರುವ ತನ್ನ ಅಕ್ಕನ ಮನೆಗೆ ಬೈಕ್‌ನಲ್ಲಿ ಹೋಗುವಾಗ ಬನಘಟ್ಟ ಗ್ರಾಮದ ಬಳಿಯ ವಿಶ್ವೇಶ್ವರಯ್ಯ ನಾಲೆ ಸೇತುವೆ ಮೇಲಿಂದ ಆಯತಪ್ಪಿ ಬಿದ್ದಿದ್ದಾನೆ.

ವಿಷಯ ತಿಳಿದ ಪೊಲೀಸರು, ಸ್ಥಳಕ್ಕೆ ಬಂದು ಮೃತದೇಹವನ್ನು ಹೊರ ತೆಗೆದಿದ್ದಾರೆ. ಪಾಂಡವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು