ಹಲಗೂರು: ಸಮೀಪದ ಜೂಗನಹಳ್ಳಿ ಗ್ರಾಮದ ಸರ್ವೇ ನಂ.14, 15 ಮತ್ತು 19/1 ರಲ್ಲಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಗೊಳಿಸಿದರು.

ರಸ್ತೆ ಒತ್ತುವರಿ ಮಾಡಿಕೊಂಡಿದ್ದರಿಂದ ನೆರೆಹೊರೆಯ ಮನೆಗಳಿಗೆ ಹೋಗಲು, ಕೃಷಿ ಚಟುವಟಿಕೆಗಳಿಗೆ ಹೋಗಿ ಬರಲು ತೀವ್ರ ತೊಂದರೆ ಪಡಬೇಕಾಗಿದ್ದು, ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅನುಕೂಲ ಆಗುವಂತೆ ರಸ್ತೆ ತೆರವು ಮಾಡಿ ಕೊಡಬೇಕೆಂದು ಅರ್ಜಿದಾರ ವಡ್ಡರದೊಡ್ಡಿ ಗ್ರಾಮದ ತಿಮ್ಮಯ್ಯ ಎಂಬುವವರು ಮಳವಳ್ಳಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದರು.

ಉನ್ನತ ಅಧಿಕಾರಿಗಳ ಅದೇಶದ ಮೇರೆಗೆ ಹಲಗೂರು ವೃತ್ತದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಮಧುಸೂಧನ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಸರ್ವೇಯರ್ ಎಂ.ಎಸ್. ಬೀರೇಶ್ ಬುಧವಾರ ಬೆಳಿಗ್ಗೆ ಸ್ಥಳಕ್ಕೆ ಬಂದು ಸಂಬಂಧಿಸಿದ ಹದ್ದಿ ಗಿಡದ ಓಣಿಯ ಜಾಗವನ್ನು ಗುರುತಿಸಿದರು.

ಎಎಸ್ಐ ಶಿವಣ್ಣ ಮತ್ತು ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ಸದರಿ ಕಾಲು ದಾರಿಯನ್ನು ತೆರವು ಗೊಳಿಸಿ, ರೈತರ ಜಮೀನುಗಳಿಗೆ ಸಂಚರಿಸಲು ಅನುವು ಮಾಡಿಕೊಡಲಾಯಿತು.

ಗ್ರಾಮ ಲೆಕ್ಕಿಗ ಸೋಮಶೇಖರ್, ಸ್ಥಳೀಯ ನಿವಾಸಿಗಳಾದ ಸುಶೀಲಮ್ಮ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.