ಮಂಡ್ಯ: ‘ಮನೆಗಳಲ್ಲೇ ಪ್ರಾಥಮಿಕವಾಗಿ ಕಸ ವಿಂಗಡಣೆ ಆಗಬೇಕು. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯ. ಜನರಲ್ಲಿ ಪರಿಸರ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ನಗರಸಭೆಯ ಧರಣಪ್ಪ ಸಭಾಂಗಣದಲ್ಲಿ ಮಂಗಳವಾರ ಸ್ವಚ್ಛ ಭಾರತ್ ಮಿಷನ್ (ನಗರ) 2.0 ಯೋಜನೆಯಡಿ ಸ್ವಚ್ಛ ಸರ್ವೇಕ್ಷಣ ಅಭಿಯಾನ 2025-26 ವಿಷಯ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಸವನ್ನು ಸಂಗ್ರಹಣೆ ಮಾಡುವುದು ಎಷ್ಟು ಮುಖ್ಯವೋ ಕಸ ವಿಂಗಡಣೆಯು ಕೂಡ ಬಹಳ ಮುಖ್ಯ. ಹಸಿ ಕಸ, ಒಣ ಕಸವನ್ನು ವಿಂಗಡಿಸಬೇಕು ಹಾಗೂ ಪ್ಲಾಸ್ಟಿಕ್ ಅನ್ನು ಬಳಸಬಾರದು ಎಂದು ಸೂಚಿಸಿದರು. ರಸ್ತೆ ಬದಿಯಲ್ಲಿ ಕಸ ಹಾಕಿದರೆ ದಂಡ ವಿಧಿಸಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಿ ಎಂದರು.

‘ನಮ್ಮ ನಗರ ಮತ್ತು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲರ ಜವಾಬ್ದಾರಿ. ನಗರದ ಅಭಿವೃದ್ಧಿ ಸಮಾಜದ ಅಭಿವೃದ್ಧಿಯಾಗಿದೆ. ಸ್ವಚ್ಛ ಭಾರತ್ ಮಿಷನ್ ಅಧಿಕಾರಿಗಳ ಕಾರ್ಯವೈಖರಿ, ಪ್ರಯತ್ನ, ಪರಿಶ್ರಮ ಬಹಳ ಮುಖ್ಯ ಎಂದರು.

ಕಸವನ್ನು ಮರುಬಳಕೆ ಮಾಡಿ ಗೊಬ್ಬರವಾಗಿ ಪರಿವರ್ತಿಸಬೇಕು. ಕಸದಿಂದ ಆದಾಯ ಗಳಿಸುವಂತಹ ಕೆಲಸವನ್ನು ಮಾಡಬೇಕು. ಮಂಡ್ಯವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು ನಮ್ಮೆಲರ ಜವಾಬ್ದಾರಿ ಎಂದು ಹೇಳಿದರು.

ನಗರಾಭಿವೃದ್ಧಿ ಕೋಶ ಜಿಲ್ಲಾ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಟಿ.ಎನ್. ಮಾತನಾಡಿ, ‘ನಗರವನ್ನು ಕಸಮುಕ್ತ ಹಾಗೂ ಬಯಲು ಶೌಚಮುಕ್ತವಾಗಿ ಮಾಡಬೇಕು. ಹಸಿ ಕಸ, ಒಣ ಕಸವನ್ನು ವಿಂಗಡಿಸಿ ಡಸ್ಟ್ ಬಿನ್ಗೆ ಹಾಕುವುದು. ಹಾಗೂ ಪ್ಲಾಸ್ಟಿಕ್ ಮುಕ್ತ ನಗರವಾಗಿ ಮಾಡಬೇಕು ಎಂದರು.

ನಗರಸಭೆಯ ಪೌರಾಯುಕ್ತೆ ಪಂಪಾಶ್ರೀ, ಪರಿಸರ ವಿಭಾಗದ ಎಂಜಿನಿಯರ್ ರುದ್ರೇಗೌಡ, ಸಹಾಯಕ ಎಂಜಿನಿಯರ್ ಪ್ರತಾಪ್ ಹಾಗೂ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.