ಮಂಡ್ಯ: ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್ನೆಸ್ ಉತ್ತೇಜಿಸಲು ಮಾರ್ಚ್ 8ರಂದು ನಗರದ ಜಿಲ್ಲಾ ಕ್ರೀಡಾಂಗಣದಿಂದ ‘ನಮ್ಮ ನಡೆ ಸ್ವಚ್ಛತೆಯ ಕಡೆ- ರನ್ ಫಾರ್ ಮಂಡ್ಯ’ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾರ್ಚ್ 8ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ₹25 ಸಾವಿರ ಜನರು ಭಾಗವಹಿಸುವಂತೆ ಈ ಮ್ಯಾರಥಾನ್ ಕಾರ್ಯಕ್ರಮಕ್ಕೆ ಸಿದ್ಥತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘಟನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಮಾರ್ಚ್ 8ರಂದು ನಡೆಯುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಬೇಕು. ಈ ಸಂಬಂಧ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ ಹಾಗೂ ಉಪಾಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ಮಾರ್ಚ್ 8ರಂದು ನಡೆಯುವ ಮ್ಯಾರಥಾನ್ ಕಾರ್ಯಕ್ರಮಕ್ಕೆ ಹೊರಗಿನಿಂದ ಭಾಗವಹಿಸಲು ಅನುಕೂಲವಾಗುವಂತೆ ಆನ್ಲೈನ್ ನೋಂದಣಿ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹಮೂರ್ತಿ ಹಾಗೂ ವಿವಿಧ ಸಂಘಟನೆಯ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.