ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ: ಸಿಪಿಐ ವೆಂಕಟೇಗೌಡ

Published 10 ಫೆಬ್ರುವರಿ 2024, 13:58 IST
Last Updated 10 ಫೆಬ್ರುವರಿ 2024, 13:58 IST
ಅಕ್ಷರ ಗಾತ್ರ

ಮದ್ದೂರು: ‘ಗ್ರಾಮೀಣ ಪ್ರದೇಶದಲ್ಲಿ ಮಾನಸ ಶಿಕ್ಷಣ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ’ ಎಂದು ಸಿಪಿಐ ವೆಂಕಟೇಗೌಡ ತಿಳಿಸಿದರು.

ತಾಲ್ಲೂಕಿನ ಬೆಸಗರಹಳ್ಳಿ ಗ್ರಾಮದ ಮಾನಸ ವಿದ್ಯಾಸಂಸ್ಥೆ ಹಾಗೂ ಮಾನಸ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಮಾನಸೋತ್ಸವ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಸವಾಲಿನ ಕೆಲಸವಾಗಿದೆ. ನಗರ ಪ್ರದೇಶದ ರೀತಿ ಮಾನಸ ವಿದ್ಯಾ ಸಂಸ್ಥೆಯು ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮನೆ ಮಾತಾಗಿದೆ’ ಎಂದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ ಅವರು ಮಾತನಾಡಿ, ‘ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಮಾನಸ ವಿದ್ಯಾಸಂಸ್ಥೆ ತಾಲ್ಲೂಕಿನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ‌. ಕಡಿಮೆ ಶುಲ್ಕದಲ್ಲಿ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಾನಸ ವಿದ್ಯಾಸಂಸ್ಥೆ ಗ್ರಾಮೀಣ ಭಾಗದ ಶಿಕ್ಷಣ ಸಂಜೀವಿನಿಯಾಗಿದೆ’ ಎಂದರು.

ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ವೇಳೆ ಅಭಿನಂದಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ವಿ.ಕೆ. ಜಗದೀಶ್ ಅವರು ಮಾತನಾಡಿ, ‘ಸಂಸ್ಥೆಯಿಂದ ಅತ್ಯಧಿಕ ಅಂಕಗಳಿಸಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ₹1 ಲಕ್ಷ ನಗದು ಪುರಸ್ಕಾರ ನೀಡಲಾಗುವುದು’ ಎಂದು ಘೋಷಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್. ಶಿವರಾಮೇಗೌಡ, ರಾಜ್ಯ ವಕೀಲರ ಪರಿಷತ್ ಸದಸ್ಯ ಮಧುಸೂದನ್, ನಿವೃತ್ತ ಪ್ರಾಂಶುಪಾಲ ಎ.ಎಸ್. ರವಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ವಿಷಯ ಪರವೀಕ್ಷಕ ನಂಜರಾಜು, ಶಿಕ್ಷಣ ಸಂಯೋಜಕ ಲೋಕೇಶ್, ಮಾನಸ ವಿದ್ಯಾಸಂಸ್ಥೆಯ ಅಧ್ಯಕ್ಷ ವಿ.ಕೆ. ಜಗದೀಶ್, ಕಾರ್ಯದರ್ಶಿ ಎಚ್.ಪಿ. ನಾಗರಾಜು, ಶೈಕ್ಷಣಿಕ ಸಲಹೆಗಾರ ಎಚ್‌.ಪಿ. ನಿಂಗರಾಜು, ಪ್ರಾಂಶುಪಾಲರಾದ ಟಿ.ಸಿ. ಪ್ರವೀಣ್ ಕುಮಾರ್, ಆರ್. ಪಲ್ಲವಿ, ಮುಖ್ಯ ಶಿಕ್ಷಕರಾದ ಬಿ.ಎಂ. ಬಸವರಾಜು, ಎನ್. ಶರತ್, ಬಿ.ವೈ. ರಮೇಶ್, ಕಲಾವತಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT