ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ನಗರ ಸಾಹಿತ್ಯ ಸಮ್ಮೇಳನ 4ರಂದು

Last Updated 31 ಡಿಸೆಂಬರ್ 2022, 13:13 IST
ಅಕ್ಷರ ಗಾತ್ರ

ಮಂಡ್ಯ: ‘ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಜ.4ರಂದು ನಗರದ ಅಂಬೇಡ್ಕರ್ ಭವನದಲ್ಲಿ ಮಂಡ್ಯ ನಗರ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತಿ ಡಾ.ಎಚ್‌.ಆರ್‌.ಕನ್ನಿಕಾ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಅಶೋಕ್‌ ಜಯರಾಂ ಹೇಳಿದರು.

‘ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಶನಿವಾರ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದೊಂದು ಮಹಿಳಾ ಪ್ರಾತಿನಿಧ್ಯದ ಸಮ್ಮೇಳನವಾಗಿದೆ. ಹಲವು ವಿಶೇಷತೆಗಳನ್ನು ಇದು ಒಳಗೊಂಡಿದೆ. ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ’ ಎಂದರು.

‘ಬೆಂಗಳೂರು ಕಿದ್ವಾಯಿ ಆಸ್ಪತ್ರೆ ಸಹಕಾರದಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಅಂಬೇಡ್ಕರ್ ಭವನದಲ್ಲಿ ಸ್ತನ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ತಪಾಸಣೆ, ಕಿಮ್ಸ್ ಆಸ್ಪತ್ರೆ ಸಹಕಾರದೊಂದಿಗೆ ಕಣ್ಣು ಮತ್ತು ದಂತ ತಪಾಸಣೆ, ಎಸ್.ಡಿ.ಜಯರಾಂ ಆಸ್ಪತ್ರೆ ಸಹಯೋಗದಲ್ಲಿ ಪೈಲ್ಸ್(ಮೊಳೆರೋಗ), ಸಕ್ಕರೆಕಾಯಿಲೆ, ರಕ್ತದೊತ್ತಡ ತಪಾಸಣೆ ಮಾಡಲಾಗುವುದು’ ಎಂದರು.

‘ಜಿಲ್ಲಾಡಳಿತದ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್‌ ವಿತರಣೆ, ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಹಾಗೂ ಆಧಾರ್ ಸಂಖ್ಯೆ ಜೋಡಣೆ, ನಮೂನೆ 9 ಅರ್ಜಿ ಸ್ವೀಕರಿಸಲಾಗುವುದು. ಅರ್ಹರಿಗೆ ಮಾಸಾಶನವನ್ನು ಮಾಡಿಸಿಕೊಡಲಾಗುವುದು. ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ಮಳಿಗೆಗಳನ್ನು ತೆರೆಯಲಾಗುವುದು. ಜೊತೆಗೆ ತಿಂಡಿ ತಿನಿಸು ಮಾರಾಟಕ್ಕೂ ಅವಕಾಶ ನೀಡಲಾಗುತ್ತದೆ’ ಎಂದು ವಿವರಿಸಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ಮಾತನಾಡಿ ‘ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಅವರು ಬೆಳಿಗ್ಗೆ 8.30 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ರೈತ ಸಭಾಂಗಣದ ಆವರಣದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹೊರಡಲಿದೆ’ ಎಂದರು.

‘ಹುಲಿ ಮಂಜುನಾಥ್ ಕಾಳೇನಹಳ್ಳಿ ತಂಡದವರಿಂದ ಸಿದ್ದಪ್ಪಾಜಿ ಕಥಾಪ್ರಸಂಗ ನಡೆಯಲಿದೆ, ಮಧ್ಯಾಹ್ನ 2 ಗಂಟೆಗೆ ವಿವಿಧ ಗೋಷ್ಠಗಳು ನಡೆಯಲಿವೆ. ಸಂಜೆ 5.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರೇಷ್ಮೆ, ಯುವ ಸಬಲೀಕರಣ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ವಹಿಸಲಿದ್ದು, ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಸಮಾರೋಪ ಭಾಷಣ ಮಾಡುವರು’ ಎಂದರು.

ಕಸಾಪ ಜಿಲ್ಲಾ ಘಟಕದ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ನಗರ ಘಟಕದ ಅಧ್ಯಕ್ಷೆ ಸುಜಾತಾ ಕೃಷ್ಣ, ಮಂಡ್ಯ ತಾಲ್ಲೂಕು ಅಧ್ಯಕ್ಷ ಮಂಜು ಮುತ್ತೇಗೆರೆ, ಚಂದ್ರಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT