ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದೂರು| ಅಕ್ರಮ ಮರಳುಗಾರಿಕೆ: ಕೊಪ್ಪರಿಕೆ ವಶ

Last Updated 23 ಫೆಬ್ರವರಿ 2023, 4:30 IST
ಅಕ್ಷರ ಗಾತ್ರ

ಮದ್ದೂರು: ಮದ್ದೂರು ಬಳಿಯ ಕೆ.ಶಿಂಷಾ ನದಿ ಪಾತ್ರದ ಕೆ.ಕೋಡಿಹಳ್ಳಿ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಉಪ ವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಪೊಲೀಸರು ಬುಧವಾರ ದಾಳಿ ನಡೆಸಿ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ದಂಧೆಕೋರರು ಮರಳು ತೆಗೆಯುತ್ತಿದ್ದ ಬಗ್ಗೆ ದೂರು ಕೇಳಿ ಬಂದಿತ್ತು.

ಕಳೆದ ಹಲವಾರು ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿಂಷಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಅಪಾರ ಪ್ರಮಾಣದಲ್ಲಿ ಮರಳು ಸಂಗ್ರಹ ವಾಗಿತ್ತು. ಇದರ ಮೇಲೆ ಅಕ್ರಮ ಮರಳು ಸಾಗಾಣಿಕೆ ಮಾಡುವವರ ಕಣ್ಣಿಗೆ ಬಿದ್ದಿತ್ತು. ಆದರೂ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳದೆ ಇದ್ದುದರ ಬಗ್ಗೆ ಖಂಡನೆ ವ್ಯಕ್ತವಾಗಿತ್ತು.

ಸಾರ್ವಜನಿಕರಿಂದ ದೂರು ಬಂದಿ ದ್ದರಿಂದ ಬುಧವಾರ ದಿಢೀರ್ ಭೇಟಿ ನೀಡಿದ ಮಂಡ್ಯ ಉಪ ವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ, ಮದ್ದೂರು ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದಾಗ ಮರಳು ದಂದೆ ಮಾಡುವವರು ಪರಾರಿಯಾಗಿದ್ದಾರೆ.

ದಾಳಿ ವೇಳೆ ಸುಮಾರು 50 ಟಿಪ್ಪರ್‌ ಮರಳು, ಮರಳು ತುಂಬಲು ಬಳಸುತ್ತಿದ್ದ ಸುಮಾರು 15 ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಂಗಳವಾರವೇ ಭೇಟಿ ನೀಡಿ ಉಪವಿಭಾಗಾಧಿಕಾರಿ ಪರಿಶೀಲನೆ ನಡೆಸಿದ್ದರು. ಸಂಜೆ ವರೆಗೂ ದಾಳಿ ಮುಂದುವರಿದಿತ್ತು.

ದಂದೆ ಕೋರರ ವಿರುದ್ಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT