ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮಂಗಲ: ಹಿಮಾಲಯಕ್ಕೆ ಚಾರಣ ಹೊರಟ ಸಂಸ್ಕೃತ ವಿದ್ಯಾರ್ಥಿಗಳು

Last Updated 10 ಮೇ 2022, 16:35 IST
ಅಕ್ಷರ ಗಾತ್ರ

ನಾಗಮಂಗಲ:ತಾಲ್ಲೂಕಿನ ಆದಿಚುಂಚನಗಿರಿಯ ಕಾಲಭೈರವೇಶ್ವರಸಂಸ್ಕೃತ ವೇದಾಗಮ ಮಹಾವಿದ್ಯಾಲಯದ 60 ವಿದ್ಯಾರ್ಥಿಗಳು ಹಿಮಾಲಯಕ್ಕೆ ಚಾರಣ ಹೊರಟಿದ್ದಾರೆ.

ಸಂಸ್ಕೃತ ವಿದ್ಯಾರ್ಥಿಗಳು ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಹಿಮಾಲಯ ಚಾರಣ ಕೈಗೊಳ್ಳುತ್ತಿದ್ದು, ಅಲ್ಲಿನ ಚಂದ್ರಕಾಣಿ ಬೇಸ್ ಕ್ಯಾಂಪ್‌ ಮೂಲಕ ಹಿಮಾಲಯದ ಸುಮಾರು 12 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ಸಂಸ್ಕೃತ ಧ್ವಜಾರೋಹಣ ಮಾಡಲಿದ್ದಾರೆ.

‘ಪ್ರಪಂಚದಲ್ಲಿ ಸರ್ವರಿಗೂ ಒಳ್ಳೆಯದಾಗಲಿ’ ಎಂಬುದು ಈ ಚಾರಣದ ಉದ್ದೇಶವಾಗಿದೆ. ವಿದ್ಯಾರ್ಥಿಗಳು 5 ದಿನಗಳ ಕಾಲ ಚಾರಣ ಮಾಡಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಚಾರಣ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಮಂಗಳವಾರ ಶುಭ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT