ಸಂತೇಬಾಚಹಳ್ಳಿ: ‘ಸರ್ಕಾರ ಮನೆ ಬಾಗಿಲಿಗೆ ತಂದಿರುವ ‘ಆರೋಗ್ಯ ಸೇತು’ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಅಜಿತ್ ಹೇಳಿದರು.

ಸಂತೇಬಾಚಹಳ್ಳಿ ಸಮೀಪದ ದೊಡ್ಡಹಾರನಹಳ್ಳಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ಆರೋಗ್ಯ ಸೇತು’ ಯೋಜನೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದರು.

‘ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಂದ ದೂರವಿರುವ ಹಳ್ಳಿಗಳಿಗೆ ‘ಆರೋಗ್ಯ ಸೇತು’ ವರದಾನವಾಗಿದೆ. ತಾಲ್ಲೂಕಿನಲ್ಲಿ ಒಟ್ಟು 52 ಹಳ್ಳಿಗಳನ್ನು ಗುರುತಿಸಿದ್ದು, ಆರೋಗ್ಯ ಇಲಾಖೆಯಿಂದ ರಕ್ತದ ಒತ್ತಡ, ಮಧುಮೇಹ, ರಕ್ತ ಪರೀಕ್ಷೆ ಸೇರಿದಂತೆ ಎಲ್ಲಾ ರೀತಿಯಲ್ಲಿ ತಪಾಸಣೆ ಮಾಡಲಾಗುವುದು. ವೈದ್ಯರು ಹಾಗೂ ನುರಿತ ಸಿಬ್ಬಂದಿ ಸರ್ಕಾರಿ ವಾಹನದೊಂದಿಗೆ ಹಳ್ಳಿಗಳಿಗೆ ಹಾಗೂ ಮನೆ ಬಾಗಿಲಿಗೆ ಬಂದು ಚಿಕಿತ್ಸೆ ನೀಡುತ್ತಾರೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಸರ್ಕಾರಿ ಅಂಬುಲೆನ್ಸ್ ಮೂಲಕ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಕಳಿಸಲಾಗುವುದು. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ಸಿ.ಎಚ್.ಒ ಅನುಷಾ, ಆರೋಗ್ಯ ಇಲಾಖೆಯ ಸಿಬ್ಬಂದಿ ವಿನಯ್, ದ್ರಾಕ್ಷಿಯಿಣಿ, ಯೋಗೇಂದ್ರ, ರಾಘು, ಗ್ರಾಮದ ಮುಖಂಡ ರಾಜೇಗೌಡ, ರಾಮೇಗೌಡ ಗವೀಗೌಡ, ರಂಗಮ್ಮ, ನಂಜೇಗೌಡ, ಮಹೇಶ್, ದೇವಮ್ಮ, ದೇವರಾಜು, ಮೊಗಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-40-1337883284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.