ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತೇಬಾಚಹಳ್ಳಿ: ರೈತನ ಮೇಲೆ ಚಿರತೆ ದಾಳಿ

Published 3 ಜುಲೈ 2024, 15:58 IST
Last Updated 3 ಜುಲೈ 2024, 15:58 IST
ಅಕ್ಷರ ಗಾತ್ರ

ಸಂತೇಬಾಚಹಳ್ಳಿ (ಮಂಡ್ಯ): ಚಿರತೆ ದಾಳಿಗೆ ರೈತ ಗಾಯಗೊಂಡಿರುವ ಘಟನೆ ಕೆ.ಆರ್. ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಆದಿಹಳ್ಳಿ ಗ್ರಾಮದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರೈತ ಮಂಜೇಗೌಡನ ಮೇಲೆ ಚಿರತೆ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಅವರಿಗೆ ಕೈ ಹಾಗೂ ಕಾಲು ಸೇರಿ ತಲೆಗೆ ಗಂಭೀರ ಗಾಯಗಳಾಗಿವೆ.

ಗಾಯಳು ಮಂಜೇಗೌಡ ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಲಾಗಿತ್ತು. ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ.

‘ಹೊಲ ಗದ್ದೆಗಳಿಗೆ ಹೋಗುವುದಕ್ಕೂ ಭಯವಾಗುತ್ತಿರುವುದರಿಂದ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ರೈತ ಮೊಗಣ್ಣ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT