ಬುಧವಾರ, ಅಕ್ಟೋಬರ್ 21, 2020
25 °C

ಗಿಡಗಳನ್ನು ಮಕ್ಕಳಂತೆ ಪೋಷಿಸಿ: ಶಶಿಧರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮದ್ದೂರು: ನಮ್ಮ ಸುತ್ತ ಮುತ್ತಲಿನ ಪರಿಸರವು ಉತ್ತಮವಾಗಿರ ಬೇಕೆಂದರೆ ಹೆಚ್ಚು ಮರ ಗಿಡಗಳನ್ನು ನೆಡುವುದರ ಜೊತೆಗೆ ಅವುಗಳನ್ನು ಮಕ್ಕಳಂತೆ ಪೋಷಿಸಿ ಬೆಳಸಬೇಕು ಎಂದು ಮಂಡ್ಯ ಜಿಲ್ಲಾ ಅರಣ್ಯ ಉಪ ವಿಭಾಗಾಧಿಕಾರಿಯಾದ ಶಶಿಧರ್ ತಿಳಿಸಿದರು.

ತಾಲ್ಲೂಕಿನ ದುಂಡನಹಳ್ಳಿಯ ಸರ್ಕಾರಿಯ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಮುಖ ಸೇವಾ ಟ್ರಸ್ಟ್, ಮದ್ದೂರು ತಾಲ್ಲೂಕು ಆರಣ್ಯ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನದ ಅಂಗವಾಗಿ ನಡೆದ ಶಾಲಾ ಆವರಣದಲ್ಲಿ 300 ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಪರಿಸರದ ಮಹತ್ವದ ಕುರಿತು ಜಾಗೃತಿಯನ್ನು ಮೂಡಿಸಿ, ಆ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬೇಕು.  ರೈತರು ಗ್ರಾಮೀಣ ಭಾಗಗಳಲ್ಲಿ ತಮ್ಮ ತಮ್ಮ ಜಮೀನುಗಳಲ್ಲಿ ಹೆಚ್ಚು ಮರ ಗಿಡಗಳನ್ನು ಬೆಳೆಸಬೇಕು, ಇದರಿಂದ ಉತ್ತಮ ಮಳೆಯಾಗುತ್ತದೆ.  ವ್ಯವಸಾಯಕ್ಕೂ ಕೂಡ ನೆರವಾಗುತ್ತದೆ ಎಂದರು.

ಸಾಹಿತಿಗಳಾದ ತೈಲೂರು ವೆಂಕಟಕೃಷ್ಣ ಮಾತನಾಡಿ, ಸಮಾಜಕ್ಕೆ ಉತ್ತಮ ಪರಿಸರದ ಅವಶ್ಯಕತೆ ಕುರಿತು ಹಾಗೂ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರು ನಡೆಸುತ್ತಿದ್ದ ಜೀವನ ಶೈಲಿಯ ಬಗ್ಗೆ ಮಾಹಿತಿ ನೀಡಿದರು. ಡಿ.ವೈ.ಎಸ್.ಪಿ. ಪೃಥ್ವಿ, ಸುಮುಖ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಡಾ. ಮಹೇಶ್, ಅಧ್ಯಕ್ಷ ರಘು, ಚಿತ್ರನಟಿಯರಾದ ಶುಭಾ ಪೂಂಜಾ, ತನುಜ, ಟ್ರಸ್ಟ್‌ನ ಉಪಾಧ್ಯಕ್ಷ ಕುಂದನಕುಪ್ಪೆ ಕುಮಾರ್, ಸಿದ್ದರಾಜು, ಶಂಕರೇಗೌಡ, ಸತೀಶ್, ಮಹೇಶ್, ಸಿ.ಕೆ.ಸತೀಶ್, ಶ್ರೀನಿವಾಸ್, ಮದ್ದೂರು ವಲಯ ಅರಣ್ಯಾಧಿಕಾರಿ ನಾಗೇಂದ್ರ ಪ್ರಸಾದ್ ಉಪತ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.