₹ 15 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ

7

₹ 15 ಕೋಟಿ ವೆಚ್ಚದಲ್ಲಿ ವಸತಿ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ

Published:
Updated:
Deccan Herald

ಮಂಡ್ಯ: ತಾಲ್ಲೂಕಿನ ತುಂಬಕೆರೆ ಗ್ರಾಮದಲ್ಲಿ ₹ 15 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಬಾಡಿಗೆ ಕಟ್ಟಡದಲ್ಲಿ ಪ್ರಾರಂಭಿಸಲಾಗಿತ್ತು. ಸರ್ಕಾರ ಶಾಲೆಗೆ 2.5 ಎಕರೆ ಸ್ಥಳ ಮಂಜೂರು ಮಾಡಿದೆ. ಈ ಜಾಗದಲ್ಲಿ ಸುಸಜ್ಜಿನ ವಸತಿ ಶಾಲೆ ನಿರ್ಮಾಣವಾಗಲಿದೆ. ಶೀಘ್ರ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಗ್ರಾಮೀಣ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದೇ ನಮ್ಮ ಉದ್ದೇಶವಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎನ್.ಯೋಗೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಕಿರಣ್‌ ಕುಮಾರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ, ಸದಸ್ಯ ವನಜಮ್ಮ, ಶೇಖರ್, ಮುಖಂಡರಾದ ಬೂದನೂರು ಸ್ವಾಮಿ, ರಘು, ಶಾಲೆಯ ಪ್ರಾಂಶುಪಾಲ ಸುರೇಶ್, ಗುತ್ತಿಗೆದಾರ ದಿಲೀಪ್‌ ಕುಮಾರ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !