ಕೆ.ಆರ್. ಪೇಟೆ: ತಾಲ್ಲೂಕಿನ ತೆಂಡೇಕೆರೆ ಗ್ರಾಮದಲ್ಲಿ ಎತ್ತಿನ ಗಾಡಿಯ ಮೇಲೆ ಮಕ್ಕಳನ್ನು ಶಾಲೆಗೆ ಕರೆತರುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.

ಪೂರ್ಣಕುಂಭ ಹೊತ್ತ ಮಹಿಳೆಯರು ಶಿಕ್ಷಣ ಸಂಯೋಜಕರು, ಪೋಷಕರು, ಶಿಕ್ಷಕರು, ಮಂಗಳವಾದ್ಯದೊಂದಿಗೆ ಹೆಜ್ಜೆ ಹಾಕಿದರು.

ಶಾಲಾ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ. ತಿಮ್ಮೇಗೌಡ ಹೂಗಳನ್ನು ನೀಡುವ ಮೂಲಕ ಸ್ವಾಗತಿಸಿದರು. ನಂತರ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾನ್ವಿತರಿದ್ದು ಗುಣಮಟ್ಟದ ಭೋಧನೆ ಇರುತ್ತದೆ. ಇದರಿಂದ ಮಕ್ಕಳು ವ್ಯಾವಹಾರಿಕವಾಗಿ ಚತುರರಾಗಿರುತ್ತಾರೆ. ಉಚಿತ ಪಠ್ಯಪುಸ್ತಕ. ಸಮವಸ್ತ್ರ. ಬಿಸಿಯೂಟ ನೀಡಲಾಗುತ್ತದೆ’ ಎಂದರು.

ಶಾಲಾ ಪ್ರಾರಂಭೋತ್ಸವದಲ್ಲಿ ಶಿಕ್ಷಣ ಸಂಯೋಜಕ ಮೋಹನ್ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜು, ಸಿ.ಆರ್.ಸಿ ಪ್ರಕಾಶ್, ಮುಖ್ಯ ಶಿಕ್ಷಕರಾದ ರಾಜು, ಮುತ್ತುರಾಜ್, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.