ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9 ವರ್ಷದಿಂದ ಮುಚ್ಚಿದ್ದ ಶಾಲೆ ಮತ್ತೆ ಆರಂಭ

Last Updated 29 ಮೇ 2019, 17:27 IST
ಅಕ್ಷರ ಗಾತ್ರ

ಮಳವಳ್ಳಿ (ಮಂಡ್ಯ ಜಿಲ್ಲೆ): ವಿದ್ಯಾರ್ಥಿಗಳ ಕೊರತೆಯಿಂದಾಗಿ ಒಂಬತ್ತು ವರ್ಷಗಳ ಹಿಂದೆ ಬಾಗಿಲು ಹಾಕಿದ್ದ, ಮಳವಳ್ಳಿ ತಾಲ್ಲೂಕಿನ ಜೆ.ಸಿ.ಪುರದ ಸರ್ಕಾರಿ ಪ್ರಾಥಮಿಕ ಶಾಲೆಯು ಬುಧವಾರ ಮತ್ತೆ ಆರಂಭವಾಗಿದೆ.

ಗ್ರಾಮಸ್ಥರ ಮನವಿ ಮೇರೆಗೆ ಶಾಲೆಯನ್ನು ಪುನರಾರಂಭಿಸಲಾಗಿದ್ದು, ಊರಿನ ಯುವಕರು ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ತೋರಣದಿಂದ ಸಿಂಗರಿಸಿದರು. ಶಾಲೆ ಆರಂಭವಾದ ದಿನವೇ ಪೂರ್ವ ಪ್ರಾಥಮಿಕ ತರಗತಿ (ಮಕ್ಕಳ ಮನೆ)ಗೆ ಹಾಗೂ ಒಂದನೇ ತರಗತಿಗೆ ತಲಾ ಏಳು ಮಕ್ಕಳು ದಾಖಲಾಗಿದ್ದಾರೆ.

‘ಖಾಸಗಿ ಶಾಲೆಗಳ ಹಾವಳಿಯಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಸ್ಥಿತಿಯಲ್ಲಿ, ಈ ಊರಿನ ಹಿರಿಯರು ಹಾಗೂ ಯುವಕರ ಶ್ರಮದಿಂದಾಗಿ ಈ ಶಾಲೆ ಮತ್ತೆ ಆರಂಭವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ.ಶಿವಲಿಂಗಯ್ಯ, ಗ್ರಾಮಸ್ಥರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರದೊಂದಿಗೆ ಗ್ರಾಮಸ್ಥರೂ ಕೈಜೋಡಿಸುವುದಾಗಿ ಗ್ರಾಮ ಪಂಚಾಯ್ತಿ ಸದಸ್ಯ ಹನುಮಯ್ಯ ಹೇಳಿದರು. ಗ್ರಾಮದ ಹಲವರು ಶಾಲಾ ಆರಂಭೋತ್ಸವದಲ್ಲಿ ಪಾಲ್ಗೊಂಡು ಸಂತೋಷ ವ್ಯಕ್ತಪಡಿಸಿದರು. ಶಿಕ್ಷಕ ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT