ಮಳವಳ್ಳಿ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಸರ್ಕಾರ ಹಲವಾರು ವಿಶೇಷ ಸೌಲಭ್ಯ ಒದಗಿಸುತ್ತಿದ್ದು, ಅವುಗಳ ಸಮರ್ಪಕ ಬಳಕೆಗೆ ಪೋಷಕರು ಮುಂದಾಗಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ಹೇಳಿದರು.

ತಾಲ್ಲೂಕಿನ ಮಿಕ್ಕೆರೆಯ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಸಿಹಿ ಮತ್ತು ಶೈಕ್ಷಣಿಕ ಸಾಮಾಗ್ರಿಗಳ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಸೇರಿದಂತೆ ಉಚಿತ ಪುಸ್ತಕ ಹಾಗೂ ಶೂ ಹೀಗೆ ಹಲವು ಸವಲತ್ತು ನೀಡಲಾಗುತ್ತಿದೆ. ಅಲ್ಲದೇ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಶಿಕ್ಷಕರು ಸಹ ಇದ್ದಾರೆ. ಇಂಥ ಸೌಲಭ್ಯಗಳನ್ನು ಮಕ್ಕಳು ಬಳಸಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ ಭವಿಷ್ಯದಲ್ಲಿ ಉನ್ನತ ಹುದ್ದೆಯನ್ನು ಪಡೆದುಕೊಳ್ಳಬೇಕು.

ಶಾಲಾ ದಾಖಲಾತಿ ಹೆಚ್ಚಳಕ್ಕೆ ಶಿಕ್ಷಕ ವೃಂದದವರು ಮತ್ತು ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಬಿಆರ್ಪಿ ಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಎಂ.ಉಮೇಶ್ ಹಾಗೂ ಪದಾಧಿಕಾರಿಗಳು, ಮುಖ್ಯಶಿಕ್ಷಕಿ ಎಂ.ಬಿ.ನಾಗರತ್ನ, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.