ಮಂಡ್ಯ: ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಶಾಲಾ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಕರ ಸಂಘದ ಸದಸ್ಯರು ಎಚ್ಚರಿಸಿದರು.

ಅನುದಾನಿತ ಶಾಲಾ–ಕಾಲೇಜುಗಳಲ್ಲಿ 2006 ನಂತರ ನೇಮಕಾತಿಯಾಗಿ ಆನಂತರ ವೇತನ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಕರ್ನಾಟಕ ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ(ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ) ವಿಧೇಯಕ 2014ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಜಾರಿಗೆ ಬರುವಂತೆ ಕ್ರಮವಹಿಸಬೇಕು’ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯ ಗ್ರೇಡ್–2 ತಹಶೀಲ್ದಾರ್ ರೋಹಿಣಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

2006 ಏಪ್ರಿಲ್ 1ರ ಪೂರ್ವದಲ್ಲಿ ನೇಮಕವಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರ ಅನುದಾನಕ್ಕೂ ಪೂರ್ವದ ಸೇವೆಯನ್ನು ಕೇವಲ ಪಿಂಚಣಿ ಸೌಲಭ್ಯಕ್ಕೆ ಮಾತ್ರ ಪರಿಗಣಿಸಿ ‘ಹಳೆಯ ನಿಶ್ಚಿತ ಪಿಂಚಣಿ’ ಸೌಲಭ್ಯ ನೀಡುವುದು, ಈಗಾಗಲೇ ಆಡಳಿತದಲ್ಲಿರುವ ತಮ್ಮ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್‌ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೆ ತರುವ ಭರವಸೆಯನ್ನು ಸರ್ಕಾರ ನೀಡಿದೆ. ನೀಡಿರುವ ಭರವಸೆಯಂತೆ ಶೀಘ್ರದಲ್ಲಿಯೇ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

‘ನಮ್ಮ ಬೇಡಿಕೆಗಳು ಈಡೇರಿಸಿದಿದ್ದರೆ ಸೆ. 5ರ ಶಿಕ್ಷಕರ ದಿನಾಚರಣೆಯ ಒಳಗಾಗಿ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಏಕಕಾಲಕ್ಕೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘದ ಪದಾಧಿಕಾರಿಗಳಾದ ಶಿವಣ್ಣ ಮಂಗಲ, ಬಲ್ಲೇನಹಳ್ಳಿ ಮಂಜುನಾಥ್, ಡಿ.ಎಂ.ಜಗದೀಶ್ ಇತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.