ಮಂಡ್ಯ: ಟೆಲಿಸ್ಕೋಪ್ ತಯಾರಿಕೆ ಸೇರಿದಂತೆ ಹಲವು ರೆಕಾರ್ಡ್ಸ್ ಪಡೆದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸುವ ಉದ್ದೇಶದಿಂದ ‘ನಾನು ವಿಜ್ಞಾನಿ’ ಕಾರ್ಯಕ್ರಮ ಆಯೋಜಿಸಲು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಭಾನುವಾರ ತೀರ್ಮಾನಿಸಲಾಯಿತು.

ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಚಿಕರಸಿನಕೆರೆ ಸಿ.ಶಿವಲಿಂಗಯ್ಯ ಮಾತನಾಡಿ, ‘ನಗರದ ಗಾಂಧಿ ಭವನದಲ್ಲಿ ನ.3 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಡೆಯಲಿದ್ದು, ಪರಿಷತ್ತಿನ ರಾಜ್ಯ ಸಮ್ಮೇಳನದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಎಚ್.ನರಸಿಂಹಯ್ಯ ಪ್ರಶಸ್ತಿಗೆ ಶಿಕ್ಷಕ ನಂಜರಾಜು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಹುಲಿಕಲ್ ನಟರಾಜು ಭಾಗವಹಿಸುವರು’ ಎಂದು ತಿಳಿಸಿದರು.

ದೊಡ್ಡಬಳ್ಳಾಪುರದಲ್ಲಿ ಅ.1ರಿಂದ 9 ರವರೆಗೆ ನಡೆದ ರಾಜ್ಯಮಟ್ಟದ ನಾನು ವಿಜ್ಞಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಟೆಲಿಸ್ಕೋಪ್ ತಯಾರಿಕೆಯಲ್ಲಿ ಸಾಧನೆ ಮಾಡಿದವರನ್ನು ಹಾಗೂ ಏಷಿಯನ್ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಮಾಡಿ ರಾಜ್ಯಪಾಲರಿಂದ ಸನ್ಮಾನಿತರಾಗಿರುವ ಜಿಲ್ಲೆಯ ವಿವಿಧ ಶಾಲೆಗಳ 16 ವಿದ್ಯಾರ್ಥಿಗಳನ್ನು ಆಹ್ವಾನಿಸುವ ಮೂಲಕ ಅವರನ್ನು ಅಭಿನಂದಿಸಲಾಗುವುದು ಎಂದರು.

ಜಿಲ್ಲಾಡಳಿತದ ಸಹಕಾರವನ್ನು ಕೋರಿದ್ದು, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ನಾಲ್ಕನೇ ರಾಜ್ಯ ಸಮ್ಮೇಳನ ಡಿ.28 ರಿಂದ 30ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು, ಜಿಲ್ಲೆಯಿಂದ ಭಾಗವಹಿಸಲು ಇಚ್ಚಿಸುವ ಆಸಕ್ತರು ಪರಿಷತನ್ ಪ್ರಧಾನ ಕಾರ್ಯದರ್ಶಿ ಗೋಪನಹಳ್ಳಿ ಕೆಂಪರಾಜು ಮೊ. 94483 45340 ಅವರ ಬಳಿ ಹೆಸರು ನೋಂದಾಯಿಸಬೇಕು ಎಂದು ತಿಳಿಸಿದರು.

ರೈತ ನಾಯಕಿ ಸುನಂದಾ ಜಯರಾಂ, ಪರಿಷತ್ತಿನ ಎಂ.ಸಿ.ಬಸವರಾಜು, ದೇವರಾಜ್ ಕೊಪ್ಪ, ಪುಷ್ಪಲತಾ, ವಸಂತಾ ವೆಂಕಟಾಚಲಯ್ಯ, ಹುರಗಲವಾಡಿ ರಾಮಯ್ಯ, ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ನ ವಿನಯ್ ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.