ಮಂಡ್ಯ: ‘ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಮ್ಮ ಕ್ರಿಯಾತ್ಮಕ ಚಟುವಟಿಕೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ತಲುಪುವಂತೆ ಕಾರ್ಯ ನಿರ್ವಹಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಿದ್ದ ವಾರ್ಷಿಕ ಪರಿಷತ್ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಇದುವರೆಗೂ 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ಗೆ ನೋಂದಣಿಯಾಗಿದ್ದಾರೆ. ಸದರಿ ಸಾಲಿನಲ್ಲಿ 8 ಸಾವಿರ ತಲುಪುವ ಗುರಿ ನಿಗದಿ ಮಾಡಿಕೊಳ್ಳಿ ಎಂದರು.

ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮಹತ್ವದ ಕುರಿತು ಶಾಲಾ ಶಿಕ್ಷಕರು ತಿಳಿಸಬೇಕು. ಬದುಕಿನಲ್ಲಿ ಶಿಸ್ತು ರೂಪಿಸಿಕೊಳ್ಳಲು, ಸಮಾಜ ಸೇವೆ, ದೇಶ ಪ್ರೇಮದಂತಹ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ಕೌಟ್ಸ್ ಅಂಡ್ ಗೈಡ್ಸ್ ಅತ್ಯಂತ ಸಹಕಾರಿಯಾಗಿದೆ ಎಂದು ಹೇಳಿದರು.

ತಾಲ್ಲೂಕು ಮಟ್ಟದಲ್ಲೂ ಸಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆಸಕ್ತ ಮಕ್ಕಳಿಗೆ ತರಬೇತಿ ನೀಡಿ. ಶಾಲಾ ಹಂತದಲ್ಲೇ ವಿದ್ಯಾರ್ಥಿಗಳು ಸಮಾಜ ಸೇವಾ ಕೆಲಸದಲ್ಲಿ ತೊಡಗಿಕೊಂಡರೆ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ಕೊಡುಗೆ ನೀಡುತ್ತಾರೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರನ್ನು ಮಂಡ್ಯ ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ಗೆ ಮಹಾಪೋಷಕರಾಗಿ ನೇಮಕ ಮಾಡಿಕೊಂಡಿದ್ದು, ಇದು ಹೆಚ್ಚಿನ ಬಲ ತುಂಬಲಿದೆ ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಉಪ ನಿರ್ದೇಶಕ ಸಿ.ಚಲುವಯ್ಯ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತ ಜಿ.ಪಿ. ಭಕ್ತವತ್ಸಲ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.