ಜಿಲ್ಲೆಯ 6 ಮಕ್ಕಳು ರಾಷ್ಟ್ರೀಯ ಫುಟ್‌ಬಾಲ್‌ಗೆ ಆಯ್ಕೆ

7

ಜಿಲ್ಲೆಯ 6 ಮಕ್ಕಳು ರಾಷ್ಟ್ರೀಯ ಫುಟ್‌ಬಾಲ್‌ಗೆ ಆಯ್ಕೆ

Published:
Updated:
Deccan Herald

ಮಂಡ್ಯ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಸತಿ ನಿಲಯದ 6 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಫುಟ್‌ಬಾಲ್‌ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

‘ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರಿನ ಬಜ್ಪೆಯಲ್ಲಿ ನಡೆದ 14 ವರ್ಷದ ಒಳಗಿನವರ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದಲ್ಲಿ ಪ್ರಥಮ ಬಹುಮಾನ ಹಾಗೂ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ನಮ್ಮ ಕ್ರೀಡಾ ವಸತಿ ನಿಲಯದ 10 ಮಕ್ಕಳು ಭಾಗವಹಿಸಿದ್ದು, ಅದರಲ್ಲಿ ಆರ್.ಎಸ್.ವೇಣುಗೌಡ, ಬಿ.ಆರ್.ತೇಜಸ್‌ಗೌಡ, ಐಬಾನ್, ಫಸ್ಟ್‌ಬಾರ್ನ್, ಶಶಾಂಕ್, ರೇವಂತ್ ಆಸ್ಸಾಂನಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ತಿಳಿಸಿದರು.

ಫುಟ್‌ಬಾಲ್‌ ತರಬೇತುದಾರರಾದ ಜಿ.ವಿ.ಬಾಬು ಗುರುರಾಜ್ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !