ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು-ಮೈಸೂರು ಹೆದ್ದಾರಿ | ಸರಣಿ ಅಪಘಾತ: ಹೊತ್ತಿ ಉರಿದ ಕಾರು, SP ಕಾರು ಜಖಂ

Published 14 ಅಕ್ಟೋಬರ್ 2023, 10:04 IST
Last Updated 14 ಅಕ್ಟೋಬರ್ 2023, 10:04 IST
ಅಕ್ಷರ ಗಾತ್ರ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿ ನಾಲ್ಕು ಕಾರು ಜಖಂಗೊಂಡಿವೆ, ಒಂದು ಕಾರು ಹೊತ್ತಿ ಉರಿದಿದೆ.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ಫೋಕ್ಸ್‌ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಡಿಕ್ಕಿಯಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ.

ಡಿಕ್ಕಿಯ ನಂತರ ಫೋಕ್ಸ್‌ ವ್ಯಾಗನ್‌ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿಗೆ ಬೆಂಕಿ ಆವರಿಸಿಕೊಳ್ಳುವಷ್ಟರಲ್ಲಿ ಸ್ಥಳೀಯರು ಕಾರಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರಿನ‌ ನವ ದಂಪತಿ ಯಶವಂತ್- ಯಶಸ್ವಿನಿ ಹಾಗೂ ಚಾಲಕ ರಾಘವೇಂದ್ರ ಅಪಾಯದಿಂದ ಪಾರಾಗಿದ್ದಾರೆ.

ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT