ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು–ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: 7 ಕಾರು ಜಖಂ

Published 15 ಜೂನ್ 2024, 19:29 IST
Last Updated 15 ಜೂನ್ 2024, 19:29 IST
ಅಕ್ಷರ ಗಾತ್ರ

ಮದ್ದೂರು: ಪಟ್ಟಣದ ಗೆಜ್ಜಲಗೆರೆ ಬಳಿ ಬೆಂಗಳೂರು– ಮೈಸೂರು‌ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದ್ದು, ಏಳು ಕಾರುಗಳು ಜಖಂಗೊಂಡಿವೆ.

ಹೆದ್ದಾರಿಯಲ್ಲಿ ಸರಕು ಸಾಗಣೆ ವಾಹನ ಅಪಘಾತವಾಗಿರುವುದನ್ನು ನೋಡಲು ಕಾರೊಂದು ನಿಲ್ಲಿಸಿದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರುಗಳು ಒಂದರ ಹಿಂದೆ ಒಂದರಂತೆ ಡಿಕ್ಕಿ ಹೊಡೆದಿವೆ. ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪಟ್ಟಣದ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ, ವಾಹನ ಸಂಚಾರ ಸುಗಮಗೊಳಿಸಿದರು. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT