ಶುಕ್ರವಾರ, ಮೇ 7, 2021
21 °C

ರೆಸಾರ್ಟ್‌ನಲ್ಲಿ ಧಾರಾವಾಹಿ ಚಿತ್ರೀಕರಣ: ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ಇಲ್ಲಿಗೆ ಸಮೀಪದ ರೆಸಾರ್ಟ್‌ವೊಂದರಲ್ಲಿ, ಕೋವಿಡ್‌ ನಿಯಮ ಉಲ್ಲಂಘಿಸಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿಯೊಂದರ ತಂಡದ ಮೇಲೆ ಶುಕ್ರವಾರ ರಾತ್ರಿ ಪೊಲೀಸರು ದಾಳಿ ಮಾಡಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನ ಕಲಾವಿದರು ಹಾಗೂ ತಂತ್ರಜ್ಞರು ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದರು. ನಿಯಮ ಉಲ್ಲಂಘಿಸಿ, ಚಿತ್ರೀಕರಣ ನಡೆಸಲು ಅವಕಾಶ ನೀಡಿದ್ದಕ್ಕೆ ರೆಸಾರ್ಟ್‌ ವ್ಯವಸ್ಥಾಪಕರನ್ನು ತರಾಟೆ ತೆಗೆದುಕೊಂಡರು.

ತಹಶೀಲ್ದಾರ್ ಎಂ.ವಿ. ರೂಪಾ ಸೂಚನೆ ಮೇರೆಗೆ  ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದ ತಂಡದ ಮುಖ್ಯಸ್ಥರಿಗೆ ದಂಡವನ್ನೂ ವಿಧಿಸಲಾಗಿದೆ’ ಎಂದು ತಹಶೀಲ್ದಾರ್‌ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು