ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು– ಬೆಂಗಳೂರು ಹೆದ್ದಾರಿ: ಪೂರ್ಣಗೊಳ್ಳದ ಸರ್ವೀಸ್‌ ರಸ್ತೆ ಕಾಮಗಾರಿ

Published 21 ಡಿಸೆಂಬರ್ 2023, 6:48 IST
Last Updated 21 ಡಿಸೆಂಬರ್ 2023, 6:48 IST
ಅಕ್ಷರ ಗಾತ್ರ

ಮದ್ದೂರು: ಮೈಸೂರು– ಬೆಂಗಳೂರು ಹೆದ್ದಾರಿ ಉದ್ಘಾಟನೆಯಾಗಿ ವರ್ಷವೇ ಕಳೆದರೂ ಪಟ್ಟಣದ ವ್ಯಾಪ್ತಿಯಲ್ಲಿ ಹಾದುಹೋಗುವ ಸರ್ವಿಸ್ ರಸ್ತೆ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆಗೆ ಸಿಲುಕಿದ್ದಾರೆ.

ಪಟ್ಟಣದ ಹಲವು ಕಡೆಗಳಲ್ಲಿ ಚರಂಡಿ ಕಾಮಗಾರಿಯು ಅಪೂರ್ಣವಾಗಿ ರಸ್ತೆಗೆ ತೆರೆದಿದ್ದು, ಒಳಚರಂಡಿ ನೀರು ರಸ್ತೆ ಮೇಲೆ ಹರಿದು ಅದನ್ನು ತುಳಿದುಕೊಂಡು ಓಡಾಡುವಂತಾಗಿದೆ.

ಪಟ್ಟಣದ ಕೊಲ್ಲಿ ಸರ್ಕಲ್, ಬಸ್‌ ನಿಲ್ದಾಣ, ಕಿರಣ್ ಬಾರ್ ಬಳಿ ಸಂಪೂರ್ಣಗೊಂಡಿಲ್ಲ. ಬಸ್ ನಿಲ್ದಾಣದಿಂದ ಎಸ್‌ಬಿಎಂ ರಸ್ತೆಗೆ ಹೋಗುವ ರಸ್ತೆ ಸೇರಿದಂತೆ ಹಲವೆಡೆ ಚರಂಡಿ ನೀರು ನಿಲ್ಲುತ್ತದೆ. ನಿಲ್ದಾಣಕ್ಕೆ ಪ್ರವೇಶಿಸುವ ತುಳಿದುಕೊಂಡೇ ಪ್ರವೇಶಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

‘ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾರಣ ಹೇಳುತ್ತಾ ಬರುತ್ತಿದ್ದಾರೆ. ಕೆಲವೊಮ್ಮೆ ಕರೆ ಸ್ವೀಕರಿಸುವುದಿಲ್ಲ.  ಪಟ್ಟಣದ ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ ಅಪೂರ್ಣದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ’ ಎಂದು ಪುರಸಭೆಯ ಮುಖ್ಯಾಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಹೆದ್ದಾರಿ ನಿರ್ಮಾಣ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಪುರಸಭೆಯವರು ಚರ್ಚಿಸಿ ಸಾರಿಗೆ ನಿಲ್ದಾಣದ ಮುಂದೆ ಅರ್ಧಕ್ಕೆ ನಿಂತಿರುವ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮಗೊಳ್ಳಬೇಕು’ ಎಂದು ಸ್ಥಳೀಯ ನಿವಾಸಿ ಕೋಳಿ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಸುಮಾರು 3 ತಿಂಗಳ ಹಿಂದೆ ಸ್ವತಃ ಜಿಲ್ಲಾಧಿಕಾರಿ ಕುಮಾರ ಅವರು ಶಾಸಕ ಉದಯ್ ಅವರೊಂದಿಗೆ ಅವ್ಯವಸ್ಥೆ ವೀಕ್ಷಿಸಿ, ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದರು.

ಮದ್ದೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಮುಂದೆ ಅಪೂರ್ಣ ಚರಂಡಿ ಕಾಮಗಾರಿಯಿಂದಾಗಿ ಅಲ್ಲಲ್ಲಿ ಗುಂಡಿಗಳಾಗಿ ಮಲಿನ ನೀರು ನಿಂತು ಹೆಚ್ಚಾದಾಗ ರಸ್ತೆಯಲ್ಲಿಯೇ ಹರಿಯುತ್ತಿದೆ.
ಮದ್ದೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಮುಂದೆ ಅಪೂರ್ಣ ಚರಂಡಿ ಕಾಮಗಾರಿಯಿಂದಾಗಿ ಅಲ್ಲಲ್ಲಿ ಗುಂಡಿಗಳಾಗಿ ಮಲಿನ ನೀರು ನಿಂತು ಹೆಚ್ಚಾದಾಗ ರಸ್ತೆಯಲ್ಲಿಯೇ ಹರಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT