ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಶಿಕ್ಷಕ ಬಂಧನ

Last Updated 1 ಫೆಬ್ರುವರಿ 2021, 13:08 IST
ಅಕ್ಷರ ಗಾತ್ರ

ಕೆ.ಆರ್‌.ಪೇಟೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಜಾತಿ ನಿಂದನೆ ಮಾಡುತ್ತಿದ್ದ ಆರೋಪದ ಮೇಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕ ಕೃಷ್ಣೇಗೌಡ ಅವರನ್ನು ಶನಿವಾರ ಗ್ರಾಮಾಂತರ ಠಾಣೆ ಬಂಧಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿದ್ಯಾರ್ಥಿನಿಯರ ಪೋಷಕರು ಕೃಷ್ಣೇಗೌಡರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ದೂರು ನೀಡಿದ್ದರು. ಶಿಕ್ಷಕ ಶಾಲೆಯಲ್ಲಿ ಸದಾ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿ ಜಾತಿ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿತ್ತು. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್‌ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ), ಎಸ್‌ಸಿ,ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT