ಮಂಗಳವಾರ, ಆಗಸ್ಟ್ 3, 2021
26 °C
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿಮತ

ಜನರ ನೋವಿಗೆ ಸ್ಪಂದಿಸುತ್ತಿದ್ದ ಶಂಕರಗೌಡ: ಪಿಇಟಿ ಕಾರ್ಯದರ್ಶಿ ಶಿವಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ನಿತ್ಯ ಸಚಿವ ಕೆ.ವಿ.ಶಂಕರಗೌಡರು ಒಂದೆರಡು ಅವಧಿಗೆ ಜನ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದರೂ, 5-6 ಅವಧಿಯಲ್ಲಿ ಮಾಡಬಹುದಾದ ಕೆಲಸವನ್ನು ಮಾಡಿದ್ದಾರೆ. ಅಧಿಕಾರದಲ್ಲಿ ಇಲ್ಲದಿದ್ದರೂ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ ಎಂದು ಪಿಇಟಿ ಕಾರ್ಯದರ್ಶಿ ಎಸ್‌.ಎಲ್‌. ಶಿವಪ್ರಸಾದ್‌ ಹೇಳಿದರು.

ನಿತ್ಯ ಸಚಿವ ಕೆ.ವಿ.ಶಂಕರಗೌಡ ಅವರ 106ನೇ ಜನ್ಮ ದಿನದ ಅಂಗವಾಗಿ ಜನತಾ ಶಿಕ್ಷಣ ಟ್ರಸ್ಟ್‌ ವತಿಯಿಂದ ಗುರುವಾರ ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜಿನ ಕೆವಿಎಸ್‌ ತರಬೇತಿ ಮತ್ತು ಉದ್ಯೋಗ ಕೇಂದ್ರ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕೆ.ವಿ. ಶಂಕರಗೌಡ ಮತ್ತು ಕೆ.ಎಸ್‌.ಸಚ್ಚಿದಾನಂದ ರಂಗಭೂಮಿ ಮತ್ತು ಸಮಾಜ ಸೇವಾ ಪ್ರಶಸ್ತಿಯನ್ನು ಕ್ರಮವಾಗಿ ರಂಗಭೂಮಿ ಕಲಾವಿದ ಜಿ.ಎಂ.ಸಿದ್ದರಾಜು, ಪಂಚಾಯತ್‌ರಾಜ್‌ ಅಭಿವೃದ್ಧಿ ಆಯುಕ್ತಾಲಯದ ನಿರ್ದೇಶಕ ಕೆ. ಯಾಲಕ್ಕಿಗೌಡ ಅವರಿಗೆ (ತಲಾ ₹25 ಸಾವಿರ ನಗದು, ಫಲಕ) ಪ್ರದಾನ ಮಾಡಿ ಮಾತನಾಡಿದರು.

ಕೆಲವರು ಚುನಾವಣೆಯಲ್ಲಿ ಸೋತ ನಂತರ ಮೂಲೆ ಗುಂಪಾಗುತ್ತಾರೆ. ಆದರೆ ಶಂಕರಗೌಡರು ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಜನರ ನೋವಿಗೆ ಶೀಘ್ರವಾಗಿ ಸದಾ ಸ್ಪಂದಿಸುತ್ತಿದ್ದ ಉದಾರ ಮನಸ್ಸಿನವರಾಗಿದ್ದರು. ರಾಜಕೀಯ, ಸಾಮಾಜಿಕ, ಶಿಕ್ಷಣ ಹಾಗೂ ಸಾಂಸ್ಕøತಿಕ ರಂಗದ ಧೃವತಾರೆಯಾಗಿದ್ದರು ಎಂದು ಬಣ್ಣಿಸಿದರು.

ಪ್ರಶಸ್ತಿ ಸ್ವೀಕರಿಸಿದ ಕೆ.ಯಾಲಕ್ಕಿಗೌಡ, ಜಿಪಂ ಸಿಇಒ ಆಗಿದ್ದ ಸಂದರ್ಭದಲ್ಲಿ ಒಂದು ಕೋಟಿಗೂ ಹೆಚ್ಚು ಮೊತ್ತದ ಕೇಂದ್ರ ಪುರಸ್ಕಾರ ಲಭಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 4ನೇ ಸ್ಥಾನ ಬಂದಿದ್ದು, ಅವಿಸ್ಮರಣೀಯವಾಗಿದ್ದು ಎಂದು ಸ್ಮರಿಸಿದರು. 

ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ನನಗೆ ಕೆ.ವಿ. ಶಂಕರಗೌಡ ಪ್ರಶಸ್ತಿ ಲಭಿಸಿರುವುದು ಬಹಳ ಖುಷಿ ತಂದಿದೆ. ಇಚ್ಛಾಶಕ್ತಿ ಇದ್ದರೆ ಶಾಸನಬದ್ಧ ಅಧಿಕಾರವನ್ನು ಉಪಯೋಗಿಸಿಕೊಂಡು ಗ್ರಾಮ ಮಟ್ಟದಲ್ಲಿ ಅನುಕೂಲ ಮಾಡಿಕೊಡುವ ಕೆಲಸವನ್ನು ಎಲ್ಲರೂ ಮಾಡಬಹುದು ಎಂದು ಹೇಳಿದರು.

ಪಿಇಟಿ ಟ್ರಸ್ಟ್‌ ಅಧ್ಯಕ್ಷ ಕೆ.ಎಸ್‌.ವಿಜಯಾನಂದ, ನಿರ್ದೇಶಕ ರಾಮಲಿಂಗಯ್ಯ, ಜಂಟಿ ಕಾರ್ಯದರ್ಶಿ ಕೆ.ಆರ್.ದಯಾನಂದ, ಉಪಾಧ್ಯಕ್ಷರಾದ ಎಂ.ಬಿ. ಶ್ರೀಧರ್, ರವಿಶಂಕರ್, ಬಿಇಡಿ ಕಾಲೇಜು ಪ್ರಾಂಶುಪಾಲರಾದ ವಿ.ಡಿ.ಸುವರ್ಣ ಇದ್ದರು.

ಶಂಕರಗೌಡ ಪ್ರಶಸ್ತಿ ಪ್ರದಾನ: ಕೃಷಿಕ ಲಯನ್ಸ್ ಸಂಸ್ಥೆ ವತಿಯಿಂದ ಇಲ್ಲಿನ ಶಂಕರ ನಗರದಲ್ಲಿನ ಗೀತಾ ಎಕ್ಸಲೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಅಕ್ಷಯ ಆಹಾರ ಫೌಂಡೇಷನ್ ಅಧ್ಯಕ್ಷ ಎಚ್.ಆರ್.ರಾಜೇಂದ್ರ ಅವರಿಗೆ ಕೆ.ವಿ. ಶಂಕರಗೌಡ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮವನ್ನು ಕೆಎಸ್‌ಆರ್‌ಪಿ ಡಿವೈಎಸ್‌ಪಿ ಕೆ.ಆರ್‌. ವಿರೂಪಾಕ್ಷೇಗೌಡ ಉದ್ಘಾಟಿಸಿದರು. ಕೃಷಿಕ ಲಯನ್ಸ್ ಸಂಸ್ಥೆ ಅಧ್ಯಕ್ಷ ಎಸ್. ರಮೇಶ್, ಆಡಳಿತಾಧಿಕಾರಿ ಕೆ.ಟಿ. ಹನುಮಂತು, ಅನಿಕೇತನ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ರಾಮಲಿಂಗಯ್ಯ, ಗೀತಾ ಕಾಲೇಜಿನ ಕಾರ್ಯದರ್ಶಿ ಪ್ರೊ. ಮಲ್ಲಿಕಾರ್ಜುನ್, ಲಯನ್ಸ್ ಸಂಸ್ಥೆಯ ಉಪಾಧ್ಯಕ್ಷ ಮೋಹನ್‌ ಕುಮಾರ್, ಖಜಾಂಚಿ ಕೆ.ಸಿ.ರವೀಂದ್ರ, ಕಾರ್ಯದರ್ಶಿ ಕುಮಾರ್, ಶ್ರೀನಿವಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು