ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಮ್ಸ್‌: ಆಮ್ಲಜನಕ ಪೂರೈಕೆ ವ್ಯತ್ಯಯ?: ತುರ್ತು ರೋಗಿಗಳಿಗೆ ಪ್ರಾಣವಾಯುವಿನ ನೆರವು

Last Updated 11 ಮೇ 2021, 21:39 IST
ಅಕ್ಷರ ಗಾತ್ರ

ಮಂಡ್ಯ: ಮಿಮ್ಸ್‌ ಆಸ್ಪತ್ರೆ ಕೋವಿಡ್ ವಾರ್ಡ್‌ನಲ್ಲಿ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ರೋಗಿಗಳು ಪರದಾಡಿದರು ಎಂಬ ದೃಶ್ಯವುಳ್ಳ ವಿಡಿಯೊವೊಂದು ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಮಂಗಳವಾರ ಸಂಜೆ 5.30ರಲ್ಲಿ ವಿದ್ಯುತ್‌ ಸಮಸ್ಯೆಯಾಗಿ ಆಮ್ಲಜನಕ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಅವರ ಸಂಬಂಧಿಕರು ವಾರ್ಡ್‌ನೊಳಗೆ ತೆರಳಿ ರೋಗಿಗಳಿಗೆ ಗಾಳಿ ಬೀಸುತ್ತಿರುವ, ಗೋಳಿಡುತ್ತಿರುವ ದೃಶ್ಯ ವಿಡಿಯೊದಲ್ಲಿ ಇದೆ. ದೃಶ್ಯ ವೈರಲ್‌ ಆದ ನಂತರ ವಾರ್ಡ್‌ನಲ್ಲಿ ಐವರು ರೋಗಿಗಳು ಆಮ್ಲಜನಕ ಪೂರೈಕೆಯಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ಮಿಮ್ಸ್‌ ನಿರ್ದೇಶಕ ಡಾ.ಎಂ.ಆರ್‌.ಹರೀಶ್‌, ‘ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ, ಐವರು ರೋಗಿಗಳು ಮೃತಪಟ್ಟಿಲ್ಲ. ಸಂಜೆ 5.28ರಲ್ಲಿ ಆರೋಗ್ಯ ಕ್ಷೀಣಿಸಿದ್ದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಆದರೆ ಅವರು ಆಮ್ಲಜನಕ ಕೊರತೆಯಿಂದ ಮೃತಪಟ್ಟಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT