ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿಗೆ ಕ್ಷಣಗಣನೆ

Last Updated 28 ಸೆಪ್ಟೆಂಬರ್ 2022, 8:36 IST
ಅಕ್ಷರ ಗಾತ್ರ

ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಮಧ್ಯಾಹ್ನ 3 ಗಂಟೆಗೆ ಶ್ರೀರಂಗಪಟ್ಟಣ ಹೊರವಲಯದ ಕಿರಂಗೂರು ಬನ್ನಿಮಂಟಪದ ಬಳಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ಚಾಮೀಜಿ ಚಾಲನೆ ನೀಡಲಿದ್ದಾರೆ.

ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.

ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ.

ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT