ಕೆ.ಆರ್.ಪೇಟೆ: ‘ಅನ್ಯರ ನೋವನ್ನು ಕಂಡು ಮರುಗುವ ಮತ್ತು ಕೈಲಾದ ಸಹಾಯ ಮಾಡುವ ಹೃದಯವಂತಿಕೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಸಮಸಮಾಜದ ಕನಸು ನನಸಾಗಬಲ್ಲದು’ ಎಂದು ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬುಧವಾರ ಸಮಾಜ ಸೇವಕ ಆರ್ಟಿಒ ಮಲ್ಲಿಕಾರ್ಜುನ್ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಒಬ್ಬ ವ್ಯಕ್ತಿಯ ಜನ್ಮದಿನ ನಿಮಿತ್ತ ಮಾತ್ರವಾಗಿದ್ದು ಇಲ್ಲಿ ನಡೆಯುತ್ತಿರುವ ಬಹುಪಯೋಗಿ ಸಾಮಾಜಿಕ ಚಟುವಟಿಕೆಗಳೆಲ್ಲಾ ಸಮಾಜಕ್ಕೆ ಅರ್ಪಿತವಾಗುವಂತಹವು’ ಎಂದರು.

ಐಎಎಸ್ ಪರಿಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಡಾ.ಮುತ್ತೇಶ್ ಗೌಡ, ಅಂತರರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ ಅವರ ತಂದೆ ತಾಯಿಯರನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು, ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಶೇ 90ಕ್ಕೂ ಅಧಿಕ ಅಂಕ ತೆಗೆದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು ಬಿಗ್ಬಾಸ್ ಖ್ಯಾತಿಯ ಗಿಲ್ಲಿನಟ ನಟರಾಜು ಮತ್ತು ಕಾವ್ಯಶೈವ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದರು. ಆರ್.ಟಿ.ಒ ಮಲ್ಲಿಕಾರ್ಜುನ್ ದಂಪತಿ, ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ದಿನೇಶ್, ಕಾಗಿನೆಲೆಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಬೇಬಿಮಠದ ಶಿವಬಸವ ಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಸ್ವತಂತ್ರ ಚನ್ನವೀರ ಸ್ವಾಮೀಜಿ, ಬೆಡದಹಳ್ಳಿ ಮಠದ ರುದ್ರಮುನಿ ಸ್ವಾಮೀಜಿ, ಆದಿಚುಂಚನಗಿರಿ ಕ್ಷೇತ್ರದ ಹೇಮಗಿರಿ ಶಾಖಾ ಮಠದ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ, ಖಾಸಗಿ ಟಿವಿ ಮುಖ್ಯಸ್ಥ ರಾಖೇಶ್ ಶೆಟ್ಟಿ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ ಜಯಪ್ರಕಾಶ್ ಗೌಡ, ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಸಿಇಒ ಅನಿಲ್ ಕುಮಾರ್, ಟ್ರಸ್ಟಿ ಗಂಜಿಗೆರೆ ಮಹೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-40-2081444808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.