ಭಾನುವಾರ, ಆಗಸ್ಟ್ 1, 2021
28 °C
ಭೂ ಪರಿವರ್ತನೆ, ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯಲು ಮೂರು ವರ್ಷಗಳ ಕಾಲಾವಕಾಶ

ಕೈಗಾರಿಕೆ ಸ್ಥಾಪನೆ ನಿಯಮಾವಳಿ ಸರಳೀಕರಣ: ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ’ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಉದ್ಯಮಿಗಳು ಇನ್ನು ಮುಂದೆ ಭೂಪರಿವರ್ತನೆಗೆ, ಕಟ್ಟಡ ನಿರ್ಮಾಣ ಅನುಮತಿ ಕೋರಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಬದಲಿಗೆ ನಿಗದಿತ ಜಾಗದಲ್ಲಿ ಕೈಗಾರಿಕೆ ಆರಂಭಿಸಿ ಮೂರು ವರ್ಷಗಳ ಒಳಗೆ ಎಲ್ಲಾ ಅನುಮತಿ ಪಡೆಯಬಹುದಾಗಿದೆ‘ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆ ಸ್ಥಾಪಿಸಲು ರಾಜ್ಯ ಮಟ್ಟದ ಸಮಿತಿಯ ಮುಂದೆ ಪ್ರಸ್ತಾವ ಸಲ್ಲಿಸಿ ಅವರಿಂದ ಅನುಮತಿ ಪತ್ರ ಪಡೆದರೆ ಸಾಕು. ಉಳಿದ ಎಲ್ಲಾ ನಿಯಮಗಳನ್ನು ಮೂರು ವರ್ಷಗಳ ಕಾಲಮಿತಿಯಲ್ಲಿ ಪೂರೈಸಿಕೊಳ್ಳಬಹುದು ಎಂದರು.

ಬೃಹತ್ ಮತ್ತು ಸಣ್ಣ ಕೈಗಾರಿಕಾ ರಂಗದಲ್ಲಿ ರಾಜ್ಯ ಸರ್ಕಾರದ ಈ ಸರಳೀಕರಣ ಪ್ರಕ್ರಿಯೆ ದೇಶದಲ್ಲಿಯೇ ಕ್ರಾಂತಿಕಾರಕ ಹೆಜ್ಜೆಯಾಗಲಿದೆ. ಹೊಸ ಕೈಗಾರಿಕಾ ನೀತಿಯಲ್ಲಿ ಎರಡು ಹಾಗೂ ಮೂರನೇ ಹಂತದ ನಗರಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.