‘ಸ್ಪೋಕನ್ ಇಂಗ್ಲಿಷ್’ ತರಬೇತಿ ನೀಡಲು ಸೂಚನೆ |ಬೀದಿಬದಿ ವ್ಯಾಪಾರಿಗಳಿಗೆ ಡಿಜಿಟಲ್ ಸಾಕ್ಷರತೆ ಅರಿವು ಮೂಡಿಸಲು ಸಲಹೆ | ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಿ

ಮಂಡ್ಯ: ‘ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ ತರಬೇತಿ ಹಾಗೂ ಸ್ವ– ಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೖಗೊಳ್ಳಿ’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಕೌಶಲ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೌಶಲ ಅಭಿವೃದ್ಧಿ ತರಬೇತಿಗಳು ಇಂದಿನ ಯುವಜನತೆಗೆ ಅಗತ್ಯವಾಗಿದೆ. ಪ್ರಸಕ್ತ ಕೈಗಾರಿಕೆ ಹಾಗೂ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾಗಿರುವ ತರಬೇತಿಗಳನ್ನು ನೀಡಲು ಕ್ರಮ ವಹಿಸುವಂತೆ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ತರಬೇತಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು.

ಯುವನಿಧಿ, ಯುವನಿಧಿ ಪ್ಲಸ್ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲವನ್ನು ಯುವಕರಿಗೆ ಕಲಿಸಿ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ತಿಳಿಸಿದರು.

ಜಿಲ್ಲೆಯ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೇರೆ ಬೇರೆ ಸಂಸ್ಥೆಗಳಿಂದ ‘ಸ್ಪೋಕನ್ ಇಂಗ್ಲಿಷ್’ ತರಬೇತಿಯನ್ನು ನೀಡುವಂತೆ ಮತ್ತು ವಿಶೇಷಚೇತನರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ನೀಡುವಂತೆ ಸೂಚಿಸಿದರು.

ಸ್ವನಿಧಿ ಯೋಜನೆಯಡಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಗೊಂಡು ಕೇಂದ್ರ ಸರ್ಕಾರದ 8 ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಯೋಜನೆಗಳ ಸಂಪರ್ಕ ಕಲ್ಪಿಸಬೇಕು ಹಾಗೂ ಸದರಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಡಿಜಿಟಲ್ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ನಾಗಾನಂದ, ಡಿಎಚ್ಒ ಡಾ.ಮೋಹನ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

‘587 ಪುಸ್ತಕ ಖರೀದಿಗೆ ತೀರ್ಮಾನ’

ಮಂಡ್ಯ: ಓದುಗರ ಆಸಕ್ತಿ ಮತ್ತು ಬೇಡಿಕೆಗೆ ಅನುಗುಣವಾಗಿ ಪುಸ್ತಕಗಳನ್ನು ಆಯ್ಕೆ ಮಾಡುವುದು ಒಂದು ಉತ್ತಮ ನಿರ್ಧಾರ. ಗ್ರಂಥಾಲಯದಲ್ಲಿ ಈ ರೀತಿಯ ಪುಸ್ತಕ ಖರೀದಿ ಮಾಡಿ ಸಂಗ್ರಹವನ್ನು ಉತ್ತಮಪಡಿಸಿ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಗ್ರಂಥಾಲಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 587 ಪುಸ್ತಕ ಖರೀದಿ ಮಾಡಲು ಸಮಿತಿಯಿಂದ ತೀರ್ಮಾನ ಮಾಡಲಾಗಿದ್ದು ಉತ್ತಮ ಅಭಿರುಚಿವುಳ್ಳ ಪುಸ್ತಕ ಖರೀದಿ ಮಾಡಿ ಎಂದು ಸಭೆಯಲ್ಲಿ ತಿಳಿಸಿದರು. ಗ್ರಂಥಾಲಯದಲ್ಲಿ ಓದುಗರ ನೋಂದಣಿಯನ್ನು ಹೆಚ್ಚಿಸಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಪ್ರಸ್ತುತ ಹೆಚ್ಚು ಮಾರಾಟವಾಗುತ್ತಿರುವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕೃತಿಗಳ ಪುಸ್ತಕ ಆಸಕ್ತಿದಾಯಕ ಬರಹಗಳಿಗೆ ಆದ್ಯತೆ ನೀಡಿ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಓದುಗರಿಗೆ ಆಕರ್ಷಕವಾದ ಮತ್ತು ಸುಸಜ್ಜಿತವಾದ ಅಧ್ಯಯನ ಕೊಠಡಿಗಳು ಕುಡಿಯುವ ನೀರು ಮತ್ತು ಶೌಚಾಲಯದಂತಹ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಿ ಎಂದು ತಿಳಿಸಿದರು. ಸಭೆಯಲ್ಲಿ ಮುಖ್ಯ ಗ್ರಂಥಾಲಯ ಅಧಿಕಾರಿ ನಾರಾಯಣಮೂರ್ತಿ ಸಮಿತಿಯ ಸದಸ್ಯರು ಹಾಗೂ ಸಾಹಿತಿಗಳಾದ ತೈಲೂರು ವೆಂಕಟಕೃಷ್ಣ ರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.