ಮದ್ದೂರು: ‘ಮದ್ದೂರಿನವರಾದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರು ಈ ನಾಡು, ದೇಶ ಕಂಡ ಅಪ್ರತಿಮ ರಾಜಕಾರಣಿಯಾಗಿದ್ದರು. ಕೇಂದ್ರ ವಿದೇಶಾoಗ ಸಚಿವರೂ ಆಗಿದ್ದ ಅವರಿಗೆ ಎಲ್ಲ ಅರ್ಹತೆಗಳಿದ್ದರೂ ಪ್ರಧಾನಿ ಸ್ಥಾನ ತಪ್ಪಿತು. ಆ ನೋವು ನಮಗೆ ಇಂದಿಗೂ ಕಾಡುತ್ತಿದೆ’ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಬುಧವಾರ ಚುಂಚಶ್ರೀ ಗೆಳೆಯರ ಬಳಗ, ನಾಡಪ್ರಭು ಕೆಂಪೇಗೌಡರ ಒಕ್ಕಲಿಗರ ಸಂಘದ ವತಿಯಿಂದ ನಡೆದ ಎಸ್.ಎಂ. ಕೃಷ್ಣ ಅವರ 94ನೇ ಜನ್ಮ ದಿನೋತ್ಸವ ಮತ್ತು ಸಂಸ್ಮರಣೆ ಹಾಗೂ ಎಸ್. ಎಂ.ಕೃಷ್ಣ ಆಡಳಿತ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಎಸ್.ಎಂ. ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಅದರಲ್ಲೂ ಬೆಂಗಳೂರನ್ನು ಜಾಗತಿಕವಾಗಿ, ಆರ್ಥಿಕವಾಗಿ ಹೆಚ್ಚು ಬಲಿಷ್ಠಗೊಳಿಸಿದರು. ರಾಜ್ಯ, ದೇಶ ಅಷ್ಟೇ ಅಲ್ಲದೇ ದೇಶದಾಚೆಗೂ ತನ್ನ ಜ್ಞಾನ ಹಾಗೂ ಆಡಳಿತ ವೈಖರಿಯಿಂದ ಹೆಸರು ಗಳಿಸಿದ್ದರು. ಅವರ ಕೀರ್ತಿ ಹಾಗೂ ಆಡಳಿತದಲ್ಲಿನ ಸಾಧನೆಗಳನ್ನು ನೆನಪಿನಲ್ಲಿಡುವ ನಿಟ್ಟಿನಲ್ಲಿ ಚುಂಚಶ್ರೀ ಗೆಳೆಯರ ಬಳಗದ ವತಿಯಿಂದ ಕೊಡಮಾಡುವ ಎಸ್.ಎಂ. ಕೃಷ್ಣ ಆಡಳಿತ ಸೇವಾ ರತ್ನ ಪ್ರಶಸ್ತಿಯನ್ನು ಅತ್ಯಂತ ಹೆಚ್ಚು ಕ್ರಿಯಾಶೀಲ ಶಾಸಕ ಕೆ.ಎಂ. ಉದಯ್ ಅವರಿಗೆ ನೀಡುತ್ತಿರುವುದು ಪ್ರಶಂಶನೀಯ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಎಂ. ಉದಯ್ ಮಾತನಾಡಿ, ಎಸ್.ಎಂ. ಕೃಷ್ಣ ಅವರು ದೇಶದ ಪ್ರಧಾನಿಯಾಗಿದ್ದರೆ ಅಭಿವೃದ್ಧಿಯ ವಿಷಯದಲ್ಲಿ ಕನಿಷ್ಠ 20 ವರ್ಷವಾದರೂ ದೇಶದ ಅಭಿವೃದ್ಧಿ ಮುಂದೆ ಹೋಗುತಿತ್ತು. ಅವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪಡೆದಿರುವುದರಿಂದ ನನಗೆ ಇನ್ನಷ್ಟು ಜವಾಬ್ದಾರಿ ಹೆಚ್ಚಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಎಸ್.ಎಂ. ಕೃಷ್ಣ ಅವರು ಮಂಡ್ಯ ಜಿಲ್ಲೆ ಕಂಡಂತಹ ಮಹಾನ್ ನಾಯಕ. ಅವರು ಅಜಾತ ಶತ್ರು ಎನಿಸಿಕೊಂಡವರು. ಅವರು ನೀರಾವರಿ ಕ್ಷೇತ್ರ, ಕೈಗಾರಿಕಾ ಕ್ಷೇತ್ರ ಸೇರಿ ಬೆಂಗಳೂರಿನಲ್ಲಿ ಐ.ಟಿ, ಬಿ.ಟಿ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಯಶಸ್ವಿನಿ ಯೋಜನೆ ಜಾರಿ, ಮೈಸೂರು– ಬೆಂಗಳೂರು ಹೆದ್ದಾರಿಯ ಆಧುನೀಕರಣ ಸೇರಿ ಅವರು ನೀಡಿದ ಕೊಡುಗೆ ಅಪಾರ ಎಂದರು.

ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ತನ್ನ ತವರು ಕ್ಷೇತ್ರ ಮದ್ದೂರಿನ ಅಭಿವೃದ್ಧಿಗೂ ಹೆಚ್ಚು ಅನುದಾನ ನೀಡಿ, ಸರ್ಕಾರಿ ಕಚೇರಿಗಳಿಗೆ ಸ್ವಂತ ಕಟ್ಟಡಗಳು, ಪಟ್ಟಣಕ್ಕೆ ಶಿಂಷಾ ನದಿಯಿಂದ ಕುಡಿಯುವ ನೀರಿನ ಪೂರೈಕೆ ಸೇರಿ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಮದ್ದೂರು ತಾಲ್ಲೂಕಿನ ಚುನಾಯಿತ ಜನಪ್ರತಿನಿಧಿಗಳು ಹಾಗೂ ಶಿಕ್ಷಣದ ಮುನ್ನೋಟ ಗ್ರಂಥ ಬಿಡುಗಡೆಗೊಳಿಸಲಾಯಿತು.

ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಪ್ರೊ.ಕೃಷ್ಣ, ಸಾಹಿತಿಗಳಾದ ಜಯಪ್ರಕಾಶ್ ಗೌಡ, ತೈಲೂರು ವೆಂಕಟಕೃಷ್ಣ, ಮಂಡ್ಯದ ನಿವೃತ್ತ ಪ್ರಾಂಶುಪಾಲರಾದ ಶಂಕರಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಕೆಂಪೇಗೌಡರ ಒಕ್ಕಲಿಗರ ಸಂಘದ ಅಧ್ಯಕ್ಷ ರವಿಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-40-533438164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.