ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆ.ಆರ್.ಪೇಟೆ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್  ಫೋನ್

Published 28 ಜೂನ್ 2024, 14:17 IST
Last Updated 28 ಜೂನ್ 2024, 14:17 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ಪಟ್ಟಣದ ಯಶಸ್ವಿನಿ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್ ಅಭಿಯಾನ್ ಅಡಿಯಲ್ಲಿ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲಾಯಿತು.

ಶಾಸಕ ಎಚ್.ಟಿ.ಮಂಜು ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿ ಮಾತನಾಡಿ, ‘ತಾಲ್ಲೂಕಿನಲ್ಲಿ 400 ಅಂಗನವಾಡಿ ಕೇಂದ್ರಗಳು ಹಾಗೂ 14 ಮೇಲ್ವಿಚಾರಕಿಯರಿಗೆ ಫೋನ್ ಅನ್ನು ನೀಡಲಾಗುತ್ತಿದೆ. ಪೋಷನ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ಪ್ರತಿನಿತ್ಯ ನಡೆಯುವ ಚಟುವಟಿಕೆ ಮತ್ತು ಅಗತ್ಯ ಮಾಹಿತಿ ಸಂಗ್ರಹಿಸಲು ಇದರಿಂದ ಅನುಕೂಲವಾಗಲಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಕೆಎಂಎಫ್ ಜಂಟಿ ನಿರ್ದೇಶಕ ಅರವಿಂದ್, ತಹಶೀಲ್ದಾರ್ ನಿಸರ್ಗಪ್ರಿಯ, ತಾಲ್ಲೂಕು ಪಂಚಾಯಿತಿ ಇಒ ಸತೀಶ್, ಸಿಡಿಪಿಒ ಅರುಣ್ ಕುಮಾರ್, ಎಸಿಡಿಪಿಒ ಪದ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT