ಹಲಗೂರು: ಜನಪರ ಹೋರಾಟಗಳ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ರೈತರು, ಕೂಲಿಕಾರರು ಮತ್ತು ಸಾರ್ವಜನಿಕರು ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಸಲಹೆ ನೀಡಿದರು.

ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಲಗೂರು ವಲಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಗ್ರಾಮಗಳಿಗೆ ಅಗತ್ಯವಿರುವ ರಸ್ತೆ, ಚರಂಡಿ, ಬೀದಿ ದೀಪ, ಸ್ಮಶಾನ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ಸ್ಥಳಿಯ ಆಡಳಿತ ಅಧಿಕಾರಿಗಳನ್ನು ಪ್ರಶ್ನಿಸುವ ಪರಿಪಾಠ ಬೆಳೆಸಿಕೊಂಡರೇ, ಸಮಸ್ಯೆ ಬಗೆಹರಿಸಿಕೊಳ್ಳಲು ಸಹಕಾರಿಯಾಗಲಿದೆ’ ಎಂದರು.

‘ಗ್ರಾಮೀಣ ಪ್ರದೇಶದ ಬಡ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕೆಲವು ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದುಕೊಂಡು, ಸಾಲ ಮರುಪಾವತಿ ಸಾಧ್ಯವಾಗದೇ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ನೋವಿನ ವಿಷಯವಾಗಿದೆ. ಜೀವ ಅಮೂಲ್ಯವಾಗಿದ್ದು, ಭಾದಿತರು ಸಾವಿಗೆ ಶರಣಾಗುವುದನ್ನು ಬಿಟ್ಟು ನಮ್ಮ ಗಮನಕ್ಕೆ ತಂದರೇ ಸಮಸ್ಯೆ ಬಗೆಹರಿಸಲು ಸಂಘಟನೆ ಮೂಲಕ ಶ್ರಮಿಸಲಾಗುವುದು’ ಎಂದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ಹಲಗೂರು ವಲಯ ಸಮಿತಿ ಅಧ್ಯಕ್ಷೆ ಕುಂತೂರು ಲಕ್ಷ್ಮೀ ಕಾರ್ಯದರ್ಶಿ ಗೊಲ್ಲರಹಳ್ಳಿ ಲಕ್ಷ್ಮೀ ಮುಖಂಡರಾದ ರಾಮಣ್ಣ, ಜ್ಯೋತಿ, ರಾಜಮ್ಮ, ಸರೋಜಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.