ಕಿಕ್ಕೇರಿ: ಹೋಬಳಿಯ ಸಾಸಲು ಗ್ರಾಮದ ಮುಜರಾಯಿ ಸ್ವಾಮ್ಯದ ಸೋಮೇಶ್ವರ, ಶಂಭುಲಿಂಗೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ಜರುಗಿತು.

ಒಂದು ತಿಂಗಳ ಅವಧಿಯಲ್ಲಿ ಭಕ್ತರು ಒಪ್ಪಿಸಿದ ಕಾಣಿಕೆ ಒಟ್ಟು ₹6,10,275 ಸಂಗ್ರಹದಲ್ಲಿತ್ತು. ಹಣವನ್ನು ಕೆ.ಆರ್. ಪೇಟೆಯ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮುಜರಾಯಿ ಅಕೌಂಟ್ಗೆ ಜಮಾ ಮಾಡಲಾಯಿತು.
ತಹಶೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಕಿಕ್ಕೇರಿ ನಾಡಕಚೇರಿ ಉಪತಹಶೀಲ್ದಾರ್ ವೀಣಾ ನೇತೃತ್ವದಲ್ಲಿ ಎಣಿಕೆ ನಡೆಯಿತು. ದೇಗುಲ ಜೀರ್ಣೋದ್ಧಾರ ನಡೆಯುತ್ತಿದೆ. ಹುಂಡಿ ರಕ್ಷಣೆಗಾಗಿ ತಿಂಗಳಿಗೊಮ್ಮೆ ಎಣಿಕೆ ಮಾಡಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ವೀಣಾ ತಿಳಿಸಿದರು.

ರಾಜಸ್ವ ನಿರೀಕ್ಷಕ ನರೇಂದ್ರ, ಗ್ರಾಮ ಆಡಳಿತಾಧಿಕಾರಿಗಳಾದ ಪ್ರಸನ್ನ, ಸೋಮಾಚಾರ್, ತಿಪ್ಪೇಶ್, ಸುನಿಲ್ ಗಾಣಿಗೇರ, ಹರ್ಷಿತ, ವನಜಾಕ್ಷಿ, ಬ್ಯಾಂಕ್ ಆಫ್ ಬರೋಡದ ಪ್ರಕಾಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.