ಶ್ರೀರಂಗಪಟ್ಟಣ: ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬುಧವಾರ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಮಗುಚಿ ಬೆಂಗಳೂರಿನಬೆಂಗಳೂರಿನ ನಾಗರಬಾವಿ ನಿವಾಸಿ ವೆಂಕಟೇಶ್ (62) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಅವರ ಪತ್ನಿ ರಶ್ಮಿ ಅವರಿಗೆ ಕಾಲು ಮುರಿದಿದೆ. ಚಾಲಕ ಗಿರೀಶ್ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪಕ್ಕಕ್ಕೆ ಚಲಿಸಿದಾಗ ಕಾರು ಹಳ್ಳಕ್ಕೆ ಉರುಳಿತು ಎಂದು ಚಾಲಕ ಗಿರೀಶ್ ತಿಳಿಸಿದ್ದಾರೆ. ವೆಂಕಟೇಶ್ ಮತ್ತು ರಶ್ಮಿ ದಂಪತಿ ಮೈಸೂರಿನ ಮಗನ ಮನೆಗೆ ತೆರಳುತ್ತಿದ್ದರು. ಸ್ಥಳಕ್ಕೆ ಸಿಪಿಐ ಬಿ.ಜಿ. ಕುಮಾರ್ ಭೇಟಿ ನೀಡಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.