ಶ್ರೀರಂಗಪಟ್ಟಣ: ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಅವರ ಹುಟ್ಟು ಹಬ್ಬವನ್ನು ಅವರ ಬೆಂಬಲಿಗರು ಮಂಗಳವಾರ ಸಂಜೆ ಸಂಭ್ರಮದಿಂದ ಆಚರಿಸಿದರು.

ಗ್ರಾಮದ ಬೋರೇದೇವರ ದೇವಾಲಯ ವೃತ್ತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಚ್ಚಿದಾನಂದ ಅವರಿಗೆ ಬೆಲ್ಲದ ಬೃಹತ್ ಹಾರ ಹಾಕಿ ಅಭಿನಂದಿಸಿದರು. ಸಚ್ಚಿದಾನಂದ ಮತ್ತು ಬಿಜೆಪಿ ಪರ ಘೋಷಣೆ ಕೂಗಿದರು. ಸಾಲು ಸಾಲು ಪಟಾಕಿ ಸಿಡಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಚ್ಚಿದಾನಂದ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಜನರ ಜೀವನಮಟ್ಟವನ್ನು ಸುಧಾರಿಸಿವೆ. ಬಡತನ ಪ್ರಮಾಣ ಕಡಿಮೆಯಾಗಿದೆ. ರಾಜ್ಯದಲ್ಲಿ ಕೂಡ ಬಿಜೆಪಿ ಬಿಲಿಷ್ಠವಾಗಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ಎಸ್. ರಮೇಶ್ ಸೇರಿದಂತೆ ಕೊಡಿಯಾಲ, ತಡಗವಾಡಿ, ಅರಕೆರೆ, ಚಿಕ್ಕಹಾರೋಹಳ್ಳಿ, ದೊಡ್ಡಹಾರೋಹಳ್ಳಿ, ಬನ್ನಹಳ್ಳಿ, ಬೆಟ್ಟಹಳ್ಳಿ, ಚೊಟ್ಟನಹಳ್ಳಿ, ಹುಣಸನಹಳ್ಳಿ ಇತರ ಗ್ರಾಮಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಾಮೂಹಿಕ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-40-971636229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.