ಶ್ರೀರಂಗಪಟ್ಟಣ: ತಾಲ್ಲೂಕಿನ ಅಚ್ಚಪ್ಪನಕೊಪ್ಪಲು ಗ್ರಾಮದಲ್ಲಿ, ಸಂಸದರ ಅನುದಾನದಲ್ಲಿ 20 ವರ್ಷಗಳ ಹಿಂದೆ ಆರಂಭವಾದ ಸಮುದಾಯ ಭವನ ನಿರ್ಮಾಣ ಕಾಮಗಾರಿ 15 ವರ್ಷಗಳಿಂದ ಸ್ಥಗಿತಗೊಂಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಅಂಬರೀಶ್ ಅವರು ಸಂಸದರಾಗಿದ್ದಾಗ, 2004ರಲ್ಲಿ ಈ ಭವನದ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಕಾಮಗಾರಿಗೆ ₹10 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಲಾಗಿದೆ. ನಂತರ ಬಂದ ಸಂಸದರು ಅನುದಾನ ನೀಡದ ಕಾರಣ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ. ಗೋಡೆ, ಪಿಲ್ಲರ್ಗಳು ಅವಶೇಷಗಳಂತೆ ಕಾಣುತ್ತಿವೆ. ಅರ್ಧ ಎದ್ದಿರುವ ಕಟ್ಟಡದ ಒಳಗೆ ಮತ್ತು ಹೊರಗೆ ಅಪಾರ ಪ್ರಮಾಣದ ಗಿಡ ಗಂಟಿಗಳು ಬೆಳೆದಿವೆ. ಹಾವು, ಹಲ್ಲಿಗಳು ಹರಿದಾಡುತ್ತಿವೆ.

‘ಗ್ರಾಮದ ಆಂಜನೇಯಸ್ವಾಮಿ ದೇವಾಲಯ ಪಕ್ಕದಲ್ಲಿ ಸಮುದಾಯ ಭವನ ನಿರ್ಮಾಣದಲ್ಲಿ ಅರ್ಧದಷ್ಟೂ ಕೆಲಸ ಮುಗಿದಿಲ್ಲ. ಕಟ್ಟಡದ ಗಾರೆ ಉದುರುತ್ತಿದೆ. ಕಬ್ಬಿಣದ ಸರಳುಗಳು ತುಕ್ಕು ಹಿಡಿಯುತ್ತಿವೆ. ಭವನದ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹತ್ತಾರು ಬಾರಿ ಮನವಿ ಸಲ್ಲಿಸಿದ್ದೇವೆ. ಈ ಬಗ್ಗೆ ಯಾರೂ ಆಸಕ್ತಿ ವಹಿಸುತ್ತಿಲ್ಲ’ ಎಂದು ಗ್ರಾಮದ ಮುಖಂಡ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು.

‘ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡರೆ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮದುವೆ ಮತ್ತು ಧಾರ್ಮಿಕ ಕಾರ್ಯಗಳಿಗೆ ಅನುಕೂಲವಾಗುತ್ತದೆ. ಅನುದಾನ ಕೇಳಿದರೆ ಅಧಿಕಾರಿಗಳು ಮತ್ತು ರಾಜಕಾರಣಿಗಳು ಸಬೂಬು ಹೇಳುತ್ತಿದ್ದಾರೆ. ಅಗತ್ಯ ಅನುದಾನ ಕೊಡಿಸಿ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಲಕ್ಷ್ಮಣ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.