ಶ್ರೀರಂಗಪಟ್ಟಣ: ‘ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೂ ಮುಟ್ಟಿಸುವ ಜತೆಗೆ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಬೇಕು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ.ಎಲ್. ದಿನೇಶ್ ಸಲಹೆ ನೀಡಿದರು.

ಪಟ್ಟಣದಲ್ಲಿ ಬುಧವಾರ ನಗರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆ ರಾಧಾ ಮರೀಗೌಡ ಅವರಿಗೆ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನ ಮಟ್ಟ ಸುಧಾರಣೆಯಾಗುತ್ತಿದೆ. ಹಸಿವಿನಿಂದ ಬಳಲುವುದು ತಪ್ಪಿದೆ. ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ, ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಆರ್ಥಿಕ ಹೊರೆ ತಗ್ಗಿದೆ. ಕ್ಷೇತ್ರದಾದ್ಯಂತ ರಸ್ತೆ, ಚರಂಡಿ, ಸೇತುವೆ, ಭವನ ಇತರ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಎಲ್ಲ ಕಾರ್ಯಗಳ ಬಗ್ಗೆ ಪಕ್ಷದ ಪದಾಧಿಕಾರಿಗಳು ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಗರ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ನೂತನೆ ಅಧ್ಯಕ್ಷೆ ರಾಧಾ ಮರೀಗೌಡ, ‘ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಜನರ ಭೇಟಿಗೆ ಸುಲಭವಾಗಿ ಸಿಗುತ್ತಾರೆ. ಹಾಗಾಗಿ ಪಕ್ಷ ಸಂಘಟನೆ ಸುಲಭವಾಗಲಿದೆ. ಕಾಲ ಕಾಲಕ್ಕೆ ಮಹಿಳಾ ಘಟಕದ ಸಭೆ ನಡೆಸಿ ಸರ್ಕಾರದ ಕಾರ್ಯಕ್ರಮಗಳನ್ನು ಮನೆ ಮನೆಗೆ ಮುಟ್ಟಿಸಲಾಗುವುದು’ ಎಂದು ಹೇಳಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಂ. ಲೋಕೇಶ್, ಟಿಎಪಿಸಿಎಂಎಸ್ ನಿರ್ದೇಶಕ ಎಂ. ನಂದೀಶ್, ಪುರಸಭೆ ಮಾಜಿ ಸದಸ್ಯರಾದ ನಿರ್ಮಲಾ, ವಸಂತಕುಮಾರಿ ಲೋಕೇಶ್, ಮಂಗಳಮ್ಮ, ಪೂರ್ಣಿಮಾ, ನಾಗರತ್ನ, ಕಾಂಗ್ರೆಸ್ ಯುವ ಘಟಕದ ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಅಭಿಷೇಕ್, ಮಹಮದ್ ಅನ್ಸರ್, ಚಂದ್ರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-1108156498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.